ಸದ್ಯಕ್ಕಿಲ್ಲ ಮೈಸೂರು ಮಹಾನಗರ ಪಾಲಿಕೆ ಮೇಯರ್ ಎಲೆಕ್ಷನ್. ಮೈಸೂರು,ಜುಲೈ,16,2021(..): ಚುನಾವಣೆ ವೇಳೆ ಸೂಕ್ತ ಆದಾಯ ಪ್ರಮಾಣ ಪತ್ರ ಸಲ್ಲಿಸದ ಹಿನ್ನೆಲೆ ಮೈಸೂರು ಮಹಾನಗರ ಪಾಲಿಕೆಯ ಹಿಂದಿನ ಮೇಯರ್ ರುಕ್ಮಿಣಿ ಮಾದೇಗೌಡ ಅವರ ಸದಸ್ಯತ್ವ ರದ್ಧಾದ ನಂತರ ಉಪಮೇಯರ್ ಅ ಅಧಿಕಾರ ನಿರ್ವಹಿಸುತ್ತಿದ್ದಾರೆ. ಈ ಮಧ್ಯೆ ಜೂನ್ 11ಕ್ಕೆ ನೂತನ ಮೇಯರ್ ಆಯ್ಕೆಗೆ ಚುನಾವಣೆಗೆ ದಿನಾಂಕ ನಿಗದಿಯಾಗಿತ್ತು. ಆದರೆ ಚುನಾವಣೆ ಮುಂದೂಡಿಕೆಯಾಗಿತ್ತು, ಈ ಮಧ್ಯೆ ಸದ್ಯಕ್ಕೆ ಮೇಯರ್ ಸ್ಥಾನಕ್ಕೆ ಚುನಾವಣೆಯ ನಡೆಯುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ. ಈ ಕುರಿತು ಇಂದ ಮೈಸೂರಿನಲ್ಲಿ ಮಾತನಾಡಿರುವ ಸಚಿವ ಎಸ್.ಟಿ ಸೋಮಶೇಖರ್, ಸಹಕಾರ ಕ್ಷೇತ್ರದ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಡೆಸಲು ಮಾತ್ರ ತೀರ್ಮಾನಿಸಲಾಗಿದೆ. ಅಭಿವೃದ್ಧಿ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜನವರಿಗೆ ಜಿಲ್ಲಾ ಪಂಚಾಯತ್ , ತಾಲ್ಲೂಕು ಪಂಚಾಯತ್ ಚುನಾವಣೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಹೇಳಿದ್ದಾರೆ. ಘಟಕವನ್ನು ಉದ್ಘಾಟನೆ… ಮೈಸೂರು ನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಘಟಕವನ್ನು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ನಗರಾಭಿವೃದ್ಧಿ ಸಚಿವ ಬಿ.ಎ. ಬೈರತಿ ಬಸವರಾಜ್ ಉದ್ಘಾಟಿಸಿದರು. ಸಚಿವದ್ವಯರಿಗೆ ಶಾಸಕ ಎಲ್ ನಾಗೇಂದ್ರ ಸಾಥ್ ನೀಡಿದರು. ಜಿಲ್ಲಾಧಿಕಾರಿ ಬಗಾದಿ ಗೌತಮ್.ಸ್ಥಳೀಯ ಮುಖಂಡರು ಅಧಿಕಾರಿಗಳು ಭಾಗಿಯಾಗಿದ್ದರು. ….. , 16, 2021 (..): - . , . 11, . - .. . - . “ . , 2022,” . - .. . .. . , , .: / - / / : -- --