ಜ.15ರೊಳಗೆ 150 ಅಭ್ಯರ್ಥಿಗಳನ್ನ ಘೋಷಣೆ ಮಾಡುತ್ತೇವೆ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ. ಬೆಂಗಳೂರು,ಜುಲೈ,15,2021(..):ಮುಂದಿನ ವಿಧಾನಸಭಾ ಚುನಾವಣೆಗೆ ಬಿಜೆಪಿ, ವಿಪಕ್ಷ ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಈಗಿನಿಂದಲೇ ಸಿದ್ಧತೆ ಆರಂಭಿಸಿದ್ದು, ಈ ಮಧ್ಯೆ ಒಂದು ಹೆಜ್ಜೆ ಮುಂದಿಟ್ಟಿರುವ ಜೆಡಿಎಸ್ ಚುನಾವಣೆಗೆ ಎರಡು ವರ್ಷ ಬಾಕಿಯಿರುವಾಗಲೇ ಅಭ್ಯರ್ಥಿಗಳ ಪಟ್ಟಿ ತಯಾರಿಕೆಗೆ ಮುಂದಾಗಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಜನವರಿ 15ರೊಳಗೆ 150 ಜೆಡಿಎಸ್ ಅಭ್ಯರ್ಥಿಗಳನ್ನ ಘೋಷಣೆ ಮಾಡುವುದಾಗಿ ತಿಳಿಸಿದ್ದಾರೆ. ಜನವರಿ.15ರೊಳಗೆ 150 ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತೇವೆ. ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಜೆಡಿಎಸ್ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಿದೆ ಎಂದರು. ಇದೇ ವೇಳೆ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ ಹೆಚ್.ಡಿ ಕುಮಾರಸ್ವಾಮಿ, ಚುನಾವಣೆಗೆ ಎರಡು ವರ್ಷ ಸಮಯವಿರುವಾಗಲೇ ಕಾಂಗ್ರೆಸ್ ಈಗಲೇ ಅಧಿಕಾರದ ಕನಸು ಕಾಣುತ್ತಿದೆ. ಒನ್ನೊಂದು ಸಲ ಒಬ್ಬೊಬ್ಬರು ನಾನೇ ಸಿಎಂ ಎನ್ನುತ್ತಿದ್ದಾರೆ. ಎಂದು ಲೇವಡಿ ಮಾಡಿದರು. : - 150 – . 15- - .