ಲಾಕ್ ಡೌನ್ ತೆರವು ಬಳಿಕ ಕ್ರೈಂ ರೇಟ್ ಜಾಸ್ತಿ : 50 ಕೋಟಿಯಷ್ಟು ಡ್ರಗ್ ನಾಶ ಮಾಡಿದ್ದೇವೆ- ಗೃಹ ಸಚಿವ ಬಸವರಾಜ ಬೊಮ್ಮಾಯಿ. ಮೈಸೂರು,ಜುಲೈ,14,2021(..):ಕೋವಿಡ್ ವೇಳೆ ಕ್ರೈಂ ರೇಟ್ ಕಡಿಮೆ ಯಾಗಿತ್ತು. ಲಾಕ್ ಡೌನ್ ತೆರವು ಬಳಿಕ ಕ್ರೈಂ ರೇಟ್ ಜಾಸ್ತಿಯಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸರಗಳ್ಳತನ, ದರೋಡೆಯಂತ ಪ್ರಕರಣಗಳು ಲಾಕ್ ಡೌನ್ ಮುಗಿದ ಬಳಿಕ ಕಂಡುಬರುತ್ತಿದೆ. ಮೈಸೂರು ನಗರದಲ್ಲಿ ಸರಗಳ್ಳತ ಇತ್ತು, ಆದರೆ ಈಗ ಜಿಲ್ಲೆಯ ಗ್ರಾಮೀಣ ಭಾಗದಲ್ಲೂ ಸರಗಳ್ಳತನ ನಡೆಯುತ್ತಿದೆ. ಸಿಂಥೆಟಿಕ್ ಡ್ರಗ್ಸ್ ತಡೆಗಟ್ಟುವ ಚಾಲೆಂಜ್ ನಮಗಿದೆ. 50ಕೋಟಿ ಅಷ್ಟು ಡ್ರಗ್ ನಾಶ ಮಾಡಿದ್ದೇವೆ. 5 ವರ್ಷದಷ್ಟು ಡ್ರಗ್ ಕೇವಲ ಒಂದೇ ವರ್ಷದಲ್ಲಿ ಸಂಗ್ರಹವಾಗಿದ್ದು, ಸಿಂಥೆಟಿಕ್ ಡ್ರಗ್ಸ್ ತಡೆಗಟ್ಟುವ ಕೆಲಸವಾಗುತ್ತಿದೆ ಎಂದರು ಡ್ರಗ್ಸ್ ವಿದೇಶದಿಂದ ಡಾರ್ಕ್ ವೆಬ್ ನಲ್ಲಿ ಬರುತ್ತಿವೆ. ಬಹಳ ಸೆಕ್ಯುರಿಟಿನಲ್ಲಿ ಬರುತ್ತಿದೆ, ಇದನ್ನ ಕರ್ನಾಟಕ ಪೊಲೀಸರು ಯಶಸ್ವಿಯಾಗಿ ಹಿಮ್ಮೆಟ್ಟಿದ್ದಾರೆ. ಬಹಳಷ್ಟು ಸಾರಿ ಸಾಮಾನ್ಯ ಪೋಸ್ಟ್ ನಲ್ಲಿ ಡ್ರಗ್ಸ್ ಸರಬರಾಜಗುತ್ತದೆ. ಡ್ರಗ್ ಕೇಸ್ ಸಂಬಂದಿಸಿದಂತೆ ವಿದೇಶಿಗರ ಬಂಧನವಾಗಿದೆ. ಕಳೆದ ವರ್ಷದಲ್ಲಿ 15ರಿಂದ 20 ಮಂದಿ ಬಂಧನವಾಗಿದೆ. ಈ ಪೈಕಿ ಆಫ್ರಿಕನ್ಸ್ ನವರೆ ಹೆಚ್ಚಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು. ಟ್ರಾಫಿಕ್ ಫೈನ್ ಸಂಗ್ರಹದ ಹಣವನ್ನ ಸ್ಥಳೀಯ ಸಂಸ್ಥೆಗಳಿಗೆ. ಟ್ರಾಫಿಕ್ ಫೈನ್ ಸಂಗ್ರಹದ ಹಣವನ್ನ ಸ್ಥಳೀಯ ಸಂಸ್ಥೆಗಳಿಗೆ ನೀಡಲಾಗ್ತಿದೆ. ಮುನ್ನೂರು ಕೋಟಿಗೂ ಅಧಿಕ ಟ್ರಾಫಿಕ್ ಫೈನ್ ಹಣ ಇದೆ. ರಸ್ತೆಗಳನ್ನು ಸರಿಪಡಿಸುವ ಕೆಲಸವನ್ನ ಸ್ಥಳೀಯ ಸಂಸ್ಥೆಗಳು ಮಾಡಬೇಕು. ಜಂಕ್ಷನ್ ಅಭಿವೃದ್ಧ ಪಡಿಸುವ ಕೆಲಸವನ್ನು ನಾವು ಮಾಡುತ್ತೇವೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. 3ರಿಂದ 4ಸಾವಿರ ಮಂದಿ ಪೊಲೀಸರಿಗೆ ಕೊರೋನಾ ಪಾಸಿಟಿವ್ ಕೊರೋನಾ ನಿಯಂತ್ರಣ ವೇಳೆಯಲ್ಲಿ ಇಲಾಖೆಯ ಪೊಲೀಸರು ಉತ್ತಮ ಕೆಲಸ ನಿರ್ವಹಿಸುತ್ತಿದ್ದಾರೆ. ಈ ಪೈಕಿ 3ರಿಂದ 4ಸಾವಿರ ಮಂದಿ ಪೊಲೀಸರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಪೈಕಿ ಎಲ್ಲರ ಆರೋಗ್ಯದ ಕಡೆಗೂ ಗಮನವಹಿಸಲಾಗುತ್ತಿದೆ. ಡೆತ್ ಅದವರ ಸಂಖ್ಯೆ ಕಡಿಮೆ ಇದೆ. ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ 30ಲಕ್ಷ ಪರಿಹಾರ ನೀಡಲಾಗುತ್ತಿದೆ. ಪೊಲೀಸರ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ವಹಿಸಲಾಗುತ್ತಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು. ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆಕ್ಕೆ ಲಂಚ ಪಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ, ಇಂತಹ ಕೆಲಸಕ್ಕೆಲ್ಲ ಇದೀಗ ಕಡಿವಾಣ ಹಾಕಲಾಗುತ್ತಿದೆ. ಇದು ಹಳೆಯ ಪದ್ದತಿ, ಆದರೆ ಇದಕ್ಕೆ ನಮ್ಮ ಸರ್ಕಾರ ಕಡಿವಾಣ ಹಾಕಿದೆ. ಪೊಲೀಸ್ ಬೋರ್ಡ್ ಬಂದಮೇಲೆ ಹಳೆಯ ಮಾದರಿಯ ವರ್ಗಾವಣೆಯಲ್ಲಿ ವ್ಯವಹಾರ ನಡೆಯೋದಿಲ್ಲ ಎಂದರು. ಪೊಲೀಸ್ ಮಕ್ಕಳಿಗೆ ಸ್ಕಾಲರ್‌ಶಿಪ್. ಪೊಲೀಸ್ ಮಕ್ಕಳಿಗೆ ಸ್ಕಾಲರ್‌ಶಿಪ್., ಹಿಂದಿನಿಂದಲೂ ಸ್ಕಾಲರ್‌ಶಿಪ್ ವ್ಯವಸ್ಥೆ ಇದೆ. ಈಗ ಇನ್ನಷ್ಟು ಹೆಚ್ಚಿನ ಅನುದಾನ ನೀಡಲು ತೀರ್ಮಾನ ಮಾಡಿದ್ದೇವೆ. ಎಸ್‌ಎಸ್‌ಎಲ್‌ಸಿ ಮತ್ತು ಅದಕ್ಕಿಂತ ಉನ್ನತ ವ್ಯಾಸಂಗಕ್ಕೆ ವಿದ್ಯಾರ್ಥಿ ವೇತನ ಸಿಗಲಿದೆ. ಈ ಯೋಜನೆ ನಿನ್ನೆಯಿಂದ ಆರಂಭ ಆಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು. ಪೊಲೀಸರಿಗೆ ವಸತಿ ಗೃಹಗಳ ಸೌಕರ್ಯ ಒದಗಿಸಬೇಕಿದೆ. ಈಗಾಗಲೇ ಶಿಥಿಲಾವಸ್ಥೆಯಲ್ಲಿರುವ ವಸತಿ ಗೃಹಗಳನ್ನು ಗುರುತಿಸಲಾಗಿದೆ. ರಾಜ್ಯಾದ್ಯಂತ ಸುಮಾರು 100 ಹೊಸ ಕಟ್ಟಡಗಳ ನಿರ್ಮಾಣಕ್ಕೂ ಚಿಂತನೆ ನಡೆಸಿದ್ದೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. … : .50 – , 14,2021 (..): “ -19 . ,” . , , “ , . , , . . .50 . . .”“ ‘ .’ , . , . . 15-20 . ,” . , . , . . 30 . ,” .: / / / : – - –-- - .