ಕೆಆರ್ ಎಸ್ ಡ್ಯಾಂ ಬಿರುಕು ಬಿಟ್ಟಿಲ್ಲ : ಸುಮಲತಾರಿಗೆ ಯಾರೂ ತಪ್ಪು ಮಾಹಿತಿ ನೀಡಿದ್ದಾರೆ- ಸಚಿವ ನಾರಾಯಣಗೌಡ. ಮಂಡ್ಯ,ಜುಲೈ,14,2021(..):ಕೆಆರ್‌ಎಸ್ ಡ್ಯಾಂ ಬಿರುಕು ಬಿಟ್ಟಿಲ್ಲ ಎನ್ನುವ ವರದಿ ನಮ್ಮ ಬಳಿ ಇದೆ. ಸಂಸದೆ ಸುಮಲತಾ ಮೇಡಂಗೆ ಯಾರೋ ತಪ್ಪು ಮಾಹಿತಿ ನೀಡಿದ್ದಾರೆ. ಮೇಡಂ ಆಫೀಸಿಗೂ ಆ ವರದಿಯನ್ನು ಕಳಿಸಿಕೊಡ್ತೇವೆ. ಅದರ ಬಗ್ಗೆ ಮೇಡಂ ಅವರಿಗೆ ಚಿಂತೆ ಬೇಡ. ಆದ್ರೆ ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ಸುಮಲಾತಾರಿಗೆ ಸಾಥ್ ಕೊಡ್ತೇವೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ತಿಳಿಸಿದರು. ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ನಾರಾಯಣಗೌಡ, ಅಕ್ರಮ ಗಣಿಗಾರಿಕೆ ಕಳೆದ ಎರಡೂವರೆ ತಿಂಗಳಿಂದ ನಡೆದಿದೆ ಅಂತ ಜ‌ನ ಹೇಳ್ತಿದ್ದಾರೆ. ಎಲ್ಲ ಅಧಿಕಾರಿಗಳನ್ನು ಕರೆದು ಎಚ್ಚರಿಕೆ ನೀಡಿದ್ದೇನೆ. ಬೇಬಿ ಬೆಟ್ಟದ ತಲೆ‌ನೋವೇ ಬೇಡ ಅಂತ ಹೇಳಿದ್ದೇವೆ. ಅಲ್ಲಿ ಇರುವ ಎರಡು ಮೂರು ಗಣಿಗೆ ಬೇರೆ ಕಡೆ ಉಚಿತವಾಗಿ ಅವಕಾಶ ಕೊಡಿ ಅಂತ ಡಿಸಿಯವರಿಗೆ ಹೇಳಿದ್ದೇನೆ ಎಂದರು. ಗಣಿಗಾರಿಕೆ ನಡೆಯಲೇಬೇಕು ಕಲ್ಲು ಜಲ್ಲಿ ಎಂ ಸ್ಯಾಂಡ್ ಬೇಕೇ ಬೇಕಾಗುತ್ತದೆ. ಅಧಿಕೃತವಾಗಿ ಅನುಮತಿ ಪಡೆದುಕೊಂಡವರು ಕ್ರಮ ಬದ್ದವಾಗಿ ನಡೆಸಲಿ. ಹಲವರು ರಾಯಲ್ಟಿ ಕಟ್ಟುತ್ತಿಲ್ಲ, ರಾಯಲ್ಟಿ ಕರೆಕ್ಟಾಗಿ ಕಟ್ಟಿಕೊಂಡು ಹೋಗಬೇಕು ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರಕ್ಕೂ ಅನುಕೂಲ. ಅದನ್ನು ಖಡಾಖಂಡಿತವಾಗಿ ಹೇಳಿದ್ದೇವೆ. ನೂರು ಲಾರಿ ಜಲ್ಲಿ ಹೊಡೆದು 5-ರಿಂದ 10 ಲಾರಿಗೆ ರಾಯಲ್ಟಿ ಕಟ್ಟೋದು ತಪ್ಪು. ರಸ್ತೆಗಳು, ಪರಿಸರ ಹಾಳಾಗ್ತಿದೆ. ಎಸ್.ಪಿ ಮಟ್ಟದ ಅಧಿಕಾರಿಗಳಿಗೂ ಅಕ್ರಮ ಗಣಿ ನಡಿತಾ ಇದ್ರೆ ಕ್ರಮ ತೆಗೆದುಕೊಳ್ಳೋದಕ್ಕೆ ಹೇಳಿದ್ದೇವೆ. ಏನಾದ್ರೂ ಮುಂದೆ ಆ ರೀತಿ ಕಂಡು ಬಂದರೆ ನಾನೇ ಸೀಜ್ ಮಾಡಿಸ್ತೇನೆ ಎಂದು ಸಚಿವ ನಾರಾಯಣಗೌಡ ತಿಳಿಸಿದರು. … : : , 14, 2021 (..): “ . . . . ,” - . , , “ --- . , . . - .”, , “ - . . , . . . 5-10 100 ! . . ,” .: - / / / / / / : – - – - - .