ಭಾರತದ ಮಾಜಿ ಕ್ರಿಕೆಟಿಗ ಯಶ್ ಪಾಲ್ ಶರ್ಮಾ ಹೃದಯಾಘಾತದಿಂದ ನಿಧನ. ಮುಂಬೈ,ಜುಲೈ,13,2021(..):ಭಾರತದ ಮಾಜಿ ಕ್ರಿಕೆಟಿಗ ಯಶ್ ಪಾಲ್ ಶರ್ಮಾ(66) ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ 7.30ರ ವೇಳೆಗೆ ಹೃದಯಾಘಾತದಿಂದ ಮಾಜಿ ಕ್ರಿಕೆಟಿಗ ಯಶ್ ಪಾಲ್ ಶರ್ಮಾ ನಿಧನರಾಗಿದ್ದಾರೆ ಎನ್ನಲಾಗಿದೆ. ಯಶ್ ಪಾಲ್ ಶರ್ಮಾ1983ರ ವಿಶ್ವಕಪ್ ತಂಡದಲ್ಲಿದ್ದರು. ಈ ಸಂದರ್ಭದಲ್ಲಿಯೇ ಮೊದಲ ಬಾರಿಗೆ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ಗೆಲುವನ್ನು ಸಾಧಿಸಿತ್ತು. 1979ರಲ್ಲಿ ಇಂಗ್ಲೇಂಡ್ ವಿರುದ್ಧ ಮೊದಲ ಪಂದ್ಯವಾಡಿದ್ದ ಯಶ್ ಪಾಲ್ ಶರ್ಮಾ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಿದ್ದರು. ಇನ್ನು ಯಶ್ ಪಾಲ್ ಶರ್ಮಾ ಅವರು ಬಿಸಿಸಿಐ ಆಯ್ಕೆ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ಧರು. 37 ಟೆಸ್ಟ್‌ ಪಂದ್ಯಗಳನ್ನು ಆಡಿರುವ ಶರ್ಮಾ 1,606 ರನ್‌ಗಳನ್ನು ಗಳಿಸಿದ್ದಾರೆ. 42 ಏಕದಿನ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 883 ರನ್‌ ಕಲೆಹಾಕಿದ್ದಾರೆ. . : - -