ಕೆಲ ದಿನಗಳಷ್ಟೇ ಉಸ್ತುವಾರಿ ಸಚಿವನಾಗಿದ್ದೆ, ಮಂಡ್ಯದ ಅಕ್ರಮ ಗಣಿಗಾರಿಕೆ ಬಗ್ಗೆ ಗೊತ್ತಿಲ್ಲ ಎಂದ ಡಿ.ಕೆ. ಶಿವಕುಮಾರ್ ಬೆಂಗಳೂರು, ಜುಲೈ 11, 2021 (..):ಮಂಡ್ಯ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಬಗ್ಗೆ ನನಗೆ ಗೊತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮಂಡ್ಯ ಜಿಲ್ಲೆಯಲ್ಲಿ ಕೆಲದಿನ ಸಚಿವನಾಗಿದ್ದೆ. ಮಂಡ್ಯ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಬಗ್ಗೆ ನನಗೆ ಗೊತ್ತಿಲ್ಲ ಎಂದಿದ್ದಾರೆ. ಯಾರೂ ಬಂದು ನನ್ನ ಹತ್ರ ಮಾತನಾಡಿಲ್ಲ. ಅಕ್ರಮ ಗಣಿಗಾರಿಕೆ ಬಗ್ಗೆ ವಿಚಾರಿಸಲು ಅಧಿಕಾರಿಗಳು ಇದ್ದಾರೆ. ಗಣಿ ಇಲಾಖೆ ಇದೆ ಅವರು ನೋಡಿಕೊಳ್ಳುತ್ತಾರೆ ಎಂದರು. ಕಾರ್ಯಕರ್ತನಿಗೆ ಹೊಡೆದ ಕುರಿತ ಪ್ರತಿಕ್ರಿಯೆ ನೀಡಿರುವ ಡಿ.ಕೆ. ಶಿವಕುಮಾರ್, ಅವನು ನಮ್ಮ ಹುಡುಗ, ನಮ್ಮ ಸಂಬಂಧಿಕ, ಹೆಗಲ ಮೇಲೆ ಕೈ ಹಾಕಲು ಬಂದಿದ್ದಕ್ಕೆ ಒಂದೇಟು ಹೊಡೆದೆ ಅಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ.