ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಸನ್ನಿ ಟ್ವೀಟ್ ಕಂಡು ಮೆಚ್ಚಿದ ನೆಟ್ಟಿಗರು! ಬೆಂಗಳೂರು, ಜುಲೈ 10, 2021 (..):ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ಸನ್ನಿ ಲಿಯೋನ್ ಟ್ವೀಟ್ ಮಾಡಿದ್ದು, ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪೆಟ್ರೋಲ್ ಬೆಲೆ ಏರಿಕೆಯ ಬಗ್ಗೆ ಮಾತನಾಡಿ ಸರ್ಕಾರವನ್ನು ಟೀಕಿಸಿರುವ ಸನ್ನಿ ಧೈರ್ಯವನ್ನು ಮೆಚ್ಚಿ ಕೊಂಡಾಡಿದ್ದಾರೆ. ಸನ್ನಿಗೆ ಇರುವ ಧೈರ್ಯ ಹಲವು ಬಾಲಿವುಡ್ ಸೂಪರ್‌ ಸ್ಟಾರ್‌ಗಳಿಗೆ ಇಲ್ಲವೆಂದು ಸೋಷಿಯಲ್ ಮೀಡಿಯಾದಲ್ಲಿ ಸ್ಟಾರ್ ನಟರ ವಿರುದ್ಧ ಟೀಕೆ ವ್ಯಕ್ತವಾಗಿದೆ. ಅಂದಹಾಗೆ ತಮಿಳುನಾಡು ವಿಧಾನಸಭೆ ಚುನಾವಣೆ ಸಮಯದಲ್ಲಿ ನಟ ವಿಜಯ್, ಸೈಕಲ್‌ನಲ್ಲಿ ತೆರಳಿ ಮತದಾನ ಮಾಡಿ ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ವ್ಯಕ್ತಪಡಿಸಿದ್ದರು.