ಮುಂದೂಡಲಾಗಿದ್ದ ಕೆ-ಸೆಟ್ ಪರೀಕ್ಷೆಗೆ ದಿನಾಂಕ ಮರು ನಿಗದಿ. ಮೈಸೂರು,ಜುಲೈ,9,2021(..):ಕೊರೋನಾ ಲಾಕ್ ಡೌನ್ ಹಿನ್ನೆಲೆ ಮುಂದೂಡಿಕೆಯಾಗಿದ್ಧ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ.ಸೆಟ್)ಗೆ ದಿನಾಂಕ ಮರುನಿಗದಿ ಮಾಡಲಾಗಿದೆ. ಜುಲೈ 25 ರಂದು ಕೆ-ಸೆಟ್ ಪರೀಕ್ಷೆ ನಡೆಯಲಿದ್ದು ಈ ಬಗ್ಗೆ ಮೈಸೂರು ವಿಶ್ವವಿದ್ಯಾನಿಲಯ ಪ್ರಕಟಣೆ ಹೊರಡಿಸಿದೆ. ಈ ಮೊದಲು ಏಪ್ರಿಲ್ 11ರಂದು ಕೆ- ಸೆಟ್ ಪರೀಕ್ಷೆ ನಡೆಸಲು ಆಯೋಜಿಸಲಾಗಿತ್ತು. ಆದರೆ ಕೋವಿಡ್ ಸೋಂಕು ಹೆಚ್ಚಾದ ಹಿನ್ನೆಲೆ ಎರಡನೇ ಹಂತದ ಲಾಕ್​ಡೌನ್ ಘೋಷಣೆ ಮಾಡಲಾಯಿತು. ಹೀಗಾಗಿ ಕೆ-ಸೆಟ್ ಪರೀಕ್ಷೆಯನ್ನು ಮುಂದೂಡಿ ಮೈಸೂರು ವಿಶ್ವವಿದ್ಯಾಲಯವು ಆದೇಶ ಹೊರಡಿಸಿತ್ತು. ಈಗ ಮತ್ತೆ ದಿನಾಂಕವನ್ನು ನಿಗದಿ ಮಾಡಿ ಮೈಸೂರು ವಿವಿ ಪ್ರಕಟಣೆ ಹೊರಡಿಸಿದೆ. ಹೆಚ್ಚಿನ ಮಾಹಿತಿಗೆ ವಿಶ್ವವಿದ್ಯಾಲಯದ ವೆಬ್ ​ಸೈಟನ್ನು ಸಂಪರ್ಕಿಸಬಹುದು :://.-../ …. - , 9, 2021 (..): (-) , . - 25, 2021. , 11. , , . . , : ://.-../: / -/ / : - – -- -