ಜೆಡಿಎಸ್ ನಾಯಕರಿಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಖಡಕ್ ವಾರ್ನಿಂಗ್. ಬೆಂಗಳೂರು,ಜುಲೈ,9,2021(..):ಕೆಆರ್ ಎಸ್ ಬಿರುಕು ಮತ್ತು ಅಕ್ರಮ ಗಣಿಗಾರಿಕೆ ಸಂಬಂಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ನಡುವಿನ ವಾಕ್ಸಮರ ವಿಚಾರದಲ್ಲಿ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮಧ್ಯಪ್ರವೇಶ ಮಾಡಿದ್ದಾರೆ. ಈ ಸಂಬಂಧ ಅನಗತ್ಯ ಹೇಳಿಕೆಗಳನ್ನು ಕೊಡದಂತೆ ಜೆಡಿಎಸ್ ನಾಯಕರು, ಶಾಸಕರಿಗೆ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಖಡಕ್ ಸೂಚನೆ ನೀಡಿದ್ದಾರೆ. ದಿನೇ ದೀನೇ ಇಂತಹ ಹೇಳಿಕೆ ನೀಡಿದರೆ ಜನರಿಗೆ ಬೇರೆ ರೀತಿ ಸಂದೇಶ ರವಾನೆಯಾಗುತ್ತದೆ. ಅಲ್ಲದೇ ಈ ರೀತಿ ಹೇಳಿಕೆಗಳಿಂದ ಪಕ್ಷಕ್ಕೆ ಡ್ಯಾಮೇಜ್ ಆಗಲಿದೆ. ರಾಜಕೀಯವಾಗಿ ಬಳಸಿಕೊಂಡು ಪಕ್ಷಕ್ಕೆ ಹಿನ್ನಡೆ ಮಾಡುತ್ತಾರೆ. ಮುಂಬರುವ ಸ್ಥಳೀಯ ಚುನಾವಣೆಗಳ ಮೇಲೂ ಪ್ರಭಾವ ಬೀರಲಿದೆ. ಹಾಗಾಗಿ ಯಾವುದೇ ಹೇಳಿಕೆ ನೀಡಬಾರದು ಎಂದು ಸೂಚಿಸಿದ್ದಾರೆ ಎನ್ನಲಾಗಿದೆ. … .. , 9, 2021 (..): .. .. ... . . . , .: / . . / / / / / / .. : – - - –