ಕೆಆರ್ ಎಸ್ ಡ್ಯಾಂಗೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ ರವೀಂದ್ರ ಶ್ರೀಕಂಠಯ್ಯ. ಮಂಡ್ಯ,ಜುಲೈ,8,2021(..):ಕೆಆರ್‌ ಎಸ್ ಡ್ಯಾಂ ಸುರಕ್ಷತೆ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದ್ದು, ಜೆಡಿಎಸ್ ನಾಯಕರು ಮತ್ತು ಸಂಸದೆ ಸುಮಲತಾ ಅಂಬರೀಶ್ ನಡುವೆ ಮಾತಿನ ಸಮರವೇ ನಡೆದಿದೆ. ಈ ಮಧ್ಯೆ ನಿನ್ನೆ ಅಕ್ರಮ ಗಣಿಗಾರಿಕೆ ಸ್ಥಳಕ್ಕೆ ಸಂಸದೆ ಸುಮಲತಾ ಅಂಬರೀಶ್ ಭೇಟಿ ನೀಡಿ ಪರಿಶೀಲಿಸಿದ್ದರು. ಈ ಬೆನ್ನಲ್ಲೆ ಇದೀಗ ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಕೆಆರ್ ಎಸ್ ಅಣೆಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಅಧೀಕ್ಷಕ ಇಂಜಿನಿಯರ್ ವನರಾಜು, ಎಇಇ ಫಾರೂಕ್ ಅಬು ಅವರಿಂದ ಡ್ಯಾಂ ಬಗ್ಗೆ ಮಾಹಿತಿ ಸಂಗ್ರಹಿಸಿದ ರವೀಂದ್ರ ಶ್ರೀಕಂಠಯ್ಯ,ಡ್ಯಾಂ ಸುರಕ್ಷತೆ ಬಗ್ಗೆ ಅಧಿಕಾರಿಗಳಿಂದ ವಿವರಣೆ ಪಡೆದರು. ಗೇಟ್ ಬದಲಾವಣೆ ಕಾಮಗಾರಿಯನ್ನೂ ಶಾಸಕ ರವೀಂದ್ರ ಶ್ರೀಕಂಠಯ್ಯ ವೀಕ್ಷಿಸಿದರು. 60 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿ ಇದಾಗಿದೆ. ಕೆಆರ್ ಎಸ್ ಸುತ್ತಾ ಮುತ್ತಾ ಅಕ್ರಮ ಗಣಿಗಾರಿಕೆಯಿಂದಾಗಿ ಕೆಆರ್ ಎಸ್ ಡ್ಯಾಂ ನಲ್ಲಿ ಬಿರುಕು ಬಿಡುತ್ತಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಆರೋಪಿಸಿದ್ದರು. : - –- -