ರಾಜ್ಯದ ನಾಲ್ವರು ಸಂಸದರಿಗೆ ಕೇಂದ್ರ ಸಚಿವ ಸ್ಥಾನ ಫಿಕ್ಸ್..? ನವದೆಹಲಿ,ಜುಲೈ,7,2021(..): ಇಂದು ಸಂಜೆ 6 ಗಂಟೆಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗಲಿದ್ದು, ಒಟ್ಟು 43 ಸಂಸದರು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿಲಿದ್ದಾರೆ. ಈ ಮಧ್ಯೆ ರಾಜ್ಯದ ನಾಲ್ವರು ಸಂಸದರಿಗೆ ಕೇಂದ್ರ ಮಂತ್ರಿ ಸ್ಥಾನ ಒಲಿದಿದೆ ಎನ್ನಲಾಗುತ್ತಿದೆ. ಚಿತ್ರದುರ್ಗ ಸಂಸದ ಎ. ನಾರಾಯಣಸ್ವಾಮಿ, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಸಂಸದ ರಾಜೀವ್ ಚಂದ್ರಶೇಖರ್, ಸಂಸದ ಭಗವಂತ ಖೂಬಾ ಅವರು ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಈವರೆಗೆ ಡಿ.ವಿ ಸದಾನಂದಗೌಡರು, ಡಾ. ಹರ್ಷವರ್ದನ್ ಸೇರಿ 8 ಮಂದಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. : –- - - - .