ಈಶಾನ್ಯ ಸಾರಿಗೆ ನಿಗಮಕ್ಕೆ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ ಎಂದು ಮರುನಾಮಕರಣ- ಡಿಸಿಎಂ ಲಕ್ಷ್ಮಣ್ ಸವದಿ. ಬೆಂಗಳೂರು,ಜುಲೈ,7,2021(..):ಈಶಾನ್ಯ ಸಾರಿಗೆ ನಿಗಮಕ್ಕೆ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಸಾರಿಗೆ ಸಚಿವ ಲಕ್ಷ್ಮಣ್ ಸವದಿ, ಸಾರಿಗೆ ನಿಗಮಗಳ ಅಧಿನಿಯಮ 1950 ರ ( ಕೇಂದ್ರ ಅಧಿನಿಯಮ 64) ಕಲಮ್ ಮೂರರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣವಾದ ನಂತರ ಈಶಾನ್ಯ ಸಾರಿಗೆಗೂ ಈ ರೀತಿ ಮರು ನಾಮಕರಣ ಮಾಡಬೇಕೆಂದು ಬಹುದಿನಗಳ ಬೇಡಿಕೆ ಸ್ಥಳೀಯರಿಂದ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಲಕ್ಷ್ಮಣ್ ಸವದಿ ಅವರು ತಿಳಿಸಿದ್ದಾರೆ. : - - - -