ಹಿರಿಯ ನಟ ದಿಲೀಪ್ ಕುಮಾರ್ ನಿಧನ: ಮೋದಿ ಸೇರಿದಂತೆ ಗಣ್ಯರ ಕಂಬನಿ ಬೆಂಗಳೂರು, ಜುಲೈ 07, 2021 (..):ಹಿರಿಯ ನಟ ದಿಲೀಪ್ ಕುಮಾರ್ ಅವರು ನಿಧನ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಮೋದಿ ಸೇರಿದಂತೆ ಗಣ್ಯರು ಕಂಬನಿ ಮಿಡಿದಿದ್ದಾರೆ. ಟ್ವೀಟ್ ಮಾಡಿರುವ ಮೋದಿ, ದಿಲೀಪ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸುತ್ತಿದ್ದೇನೆ. ದಿಲೀಪ್ ಅವರನ್ನು ಸಿನಿಮೀಯ ದಂತಕಥೆ ಎಂದು ಸ್ಮರಿಸಲಾಗುತ್ತದೆ ಎಂದು ಸ್ಮರಿಸಿದ್ದಾರೆ. ಅವರ ನಿಧನ ನಮ್ಮ ಸಾಂಸ್ಕೃತಿಕ ಜಗತ್ತಿಗೆ ಆಗಿರುವ ದೊಡ್ಡ ನಷ್ಟವಾಗಿದೆ ಎಂದು ಮೋದಿ ತಿಳಿಸಿದ್ದಾರೆ.