ಪವರ್ ಸ್ಟಾರ್ ಬ್ಯಾಕ್ ಟು ಶೂಟಿಂಗ್ ! ಬೆಂಗಳೂರು, ಜುಲೈ 06, 2021 (..):ನಟ ಪುನೀತ್ ರಾಜ್ ಕುಮಾರ್ ಮತ್ತೆ ಶೂಟಿಂಗ್ ಗೆ ಮರಳಿದ್ದಾರೆ. ಲಾಕ್ ಡೌನ್ ಮುಗಿದ ಬಳಿಕ ಇದೇ ಮೊದಲ ಬಾರಿಗೆ ಪವರ್ ಸ್ಟಾರ್ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಚೇತನ್ ಕುಮಾರ್ ನಿರ್ದೇಶನದ ಜೇಮ್ಸ್ ಸಿನಿಮಾ ಶೂಟಿಂಗ್ ನಲ್ಲಿ ಅವರು ಪಾಲ್ಗೊಂಡಿದ್ದಾರೆ. ಲಾಕ್ ಡೌನ್ ನಿಂದಾಗಿ ಬ್ರೇಕ್ ಆಗಿತ್ತು. ಇದೀಗ ಮತ್ತೆ ಶೂಟಿಂಗ್ ಆರಂಭವಾಗಿದೆ. ಸಾಹಸ ದೃಶ್ಯಗಳ ಚಿತ್ರೀಕರಣವನ್ನು ವಿಶೇಷ ಸೆಟ್ ನಲ್ಲಿ ಚಿತ್ರೀಕರಿಸಲಾಗಿದೆ. ಈ ವರ್ಷವೇ ಚಿತ್ರ ತೆರೆ ಕಾಣುವ ಸಾಧ್ಯತೆ ಇದೆ.