ಮೈಸೂರು ರೈಲ್ವೆ ನಿಲ್ದಾಣ ಮತ್ತು ವಿಮಾನ ನಿಲ್ದಾಣಕ್ಕೆ ಮರುನಾಮಕರಣ ಮಾಡುವಂತೆ ಸಂಸದ ಪ್ರತಾಪ್ ಸಿಂಹ ಮನವಿ. ಮೈಸೂರು,ಜುಲೈ3,2021(..):ಮೈಸೂರು ರೈಲ್ವೆ ನಿಲ್ದಾಣವನ್ನು ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್, ಮೈಸೂರು ಜಂ. ಎಂದು ಮರುನಾಮಕರಣ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ. ಹಾಗೆಯೇ ಮೈಸೂರು ವಿಮಾನ ನಿಲ್ದಾಣವನ್ನು ಶ್ರೀ ಜಯಚಾಮರಾಜ ಒಡೆಯರ್ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡುವಂತೆ ಕೇಂದ್ರ ವಿಮಾನಯಾನ ಸಚಿವರಾದ ಹರದೀಪ್ ಸಿಂಗ್ ಪುರಿ, ಅವರನ್ನು ಸಂಸದ ಪ್ರತಾಪ್ ಸಿಂಹ ಕೋರಿದ್ದಾರೆ. : - - –- – .