ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ. ಮೈಸೂರು,ಜುಲೈ,3,2021(..): ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿದ್ದಾರೆ. ಮೈಸೂರಿನ ಸುತ್ತೂರು ಶ್ರೀ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿಗಳ ಪೂರ್ವಾಶ್ರಮದ ಮಾತೃಶೀ ನಿಧನರಾದ ಹಿನ್ನೆಲೆಯಲ್ಲಿ ಸಂತಾಪ ಸೂಚನೆಗೆ ಕೇಂದ್ರ ಸಚಿವ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದರು. ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶ್ರೀಗಳ ಆಶೀರ್ವಾದ ಪಡೆದು ನಂತರ ಶ್ರೀಗಳ ಜತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. : - - – -