ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಎಫ್‍ ಕೆಸಿಸಿಐ ಅಧ್ಯಕ್ಷ ಪೆರಿಕಲ್ ಎಂ ಸುಂದರ್: ಮನವಿ ಸಲ್ಲಿಕೆ ಬೆಂಗಳೂರು,ಜುಲೈ,2,2021(..): ಎಫ್‍ಕೆಸಿಸಿಐ ಅಧ್ಯಕ್ಷ ಪೆರಿಕಲ್ ಎಂ ಸುಂದರ್ ಮತ್ತು ಹಿರಿಯ ಉಪಾಧ್ಯಕ್ಷರಾದ ಸಿಎ ಡಾ. ಐ.ಎಸ್. ಪ್ರಸಾದ್, ಉಪಾಧ್ಯಕ್ಷ ಬಿ.ವಿ ಗೋಪಾಲ್ ರೆಡ್ಡಿ ಹಾಗೂ ಪ್ರಭುದೇವ್ ಆರಾಧ್ಯ, ಛೇರ್ಮನ್, ಬ್ಯಾಂಕಿಂಗ್ ಮತ್ತು ಹಣಕಾಸು ಸಮಿತಿ ಎಫ್‍ಕೆಸಿಸಿಐ ಇವರು ಇಂದು ಕೇಂದ್ರ ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್‍ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಈ ಕೆಳಗಿನ ವಿಷಯಗಳ ಕುರಿತು ಮನವಿ ಪತ್ರವನ್ನು ಸಲ್ಲಿಸಿದರು. ಕೋವಿಡ್-19 ಸಾಂಕ್ರಾಮಿಕ ರೋಗದ ಪ್ರಭಾವವನ್ನು ಗಮನದಲ್ಲಿಟ್ಟುಕೊಂಡು ಎಂಎಸ್‍ಎಂಇ ವಲಯವನ್ನು ಸುಧಾರಿಸಲು ಮತ್ತು ಕಾರ್ಪೋರೇಟ್ ವ್ಯವಹಾರಗಳಲ್ಲಿನ ಕಾರ್ಯವಿಧಾನಗಳಲ್ಲಿ ಸುಧಾರಣೆಗಳನ್ನು ತರಲು ಈ ಕೆಳಗಿನ ವಿಷಯಗಳ ಕುರಿತು ಚರ್ಚಿಸಿದರು. ಕಾರ್ಪೋರೇಟ್ ವ್ಯವಹಾರಗಳಲ್ಲಿ ಅಗತ್ಯ ಸುಧಾರಣೆಗಳನ್ನು ತರಲು ಈ ಕೆಳಗಿನ ವಿಷಯಗಳ ಬಗ್ಗೆ ವಿನಂತಿಯನ್ನು ಸಲ್ಲಿಸಲಾಯಿತು. ಈ ಎಲ್ಲಾ ವಿಷಯಗಳ ಕುರಿತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕೂಲಂಕುಷವಾಗಿ ಆಲಿಸಿ ಸಂಬಂಧಪಟ್ಟ ಅಧಿಕಾರಗಳೊಂದಿಗೆ ಚರ್ಚಿಸಿ ಶೀಘ್ರದಲ್ಲೇ ನಿರ್ಧರಿಸುತ್ತೇನೆಂದು ಎಫ್‍ಕೆಸಿಸಿಐ ನಿಯೋಗಕ್ಕೆ ಭರವಸೆ ನೀಡಿದರು. : - – -- - .