ಸಚಿವ ಶ್ರೀರಾಮುಲು ಪಿಎ ಬಂಧನ ವಿಚಾರ: ಸ್ಪಷ್ಟನೆ ನೀಡಿದ ಬಿ.ವೈ ವಿಜಯೇಂದ್ರ. ಬೆಂಗಳೂರು,ಜುಲೈ,2,2021(..):ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಮತ್ತು ಸಚಿವ ಶ್ರೀರಾಮುಲು ಹೆಸರು ಹೇಳಿಕೊಂಡು ವಂಚನೆ ಮಾಡಿದ ಆರೋಪದ ಮೇಲೆ ಸಚಿವ ಶ್ರೀರಾಮುಲು ಅವರ ಆಪ್ತ ಸಹಾಯಕ ರಾಜಣ್ಣ ಅವರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿಎಂ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ದೂರಿನ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ರಾಜಣ್ಣ ಅವರನ್ನ ವಶಕ್ಕೆ ಪಡೆದಿದ್ದಾರೆ. ಈ ಕುರಿತು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿರುವ ಬಿವೈ ವಿಜಯೇಂದ್ರ, ಸಾರ್ವಜನಿಕ ಕ್ಷೇತ್ರದಲ್ಲಿರುವಾಗ ನೆರವು ಕೇಳುವವರನ್ನು ಅನುಮಾನಿಸಿ ನೋಡಲಾಗದು. ಹಾಗೆಂದು ಎಚ್ಚರ ತಪ್ಪಲಾಗದು. ಹೆಸರು ದುರುಪಯೋಗಪಡಿಸಿಕೊಂಡು ಕಳಂಕ ಹಚ್ಚುವ ವಂಚಕರಿಂದ ತೊಂದರೆ ತುಸು ಹೆಚ್ಚಾಗಿಯೇ ಬಾಧಿಸುತ್ತಿದೆ. ಇದು ವಿರೋಧಿಗಳಿಗೆ ಅಪಪ್ರಚಾರದ ಸರಕಾಗಿಯೂ ಬಳಕೆಯಾಗುತ್ತಿದೆ ಎಂದಿದ್ದಾರೆ. ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ ಹಾಗೂ ನನ್ನ ವ್ಯಕ್ತಿತ್ವ ರಕ್ಷಣೆಗಾಗಿ, ಅನಿವಾರ್ಯವಾಗಿ ನೀಡಿದ ದೂರಿನ ಮೇಲೆ ಪೋಲಿಸರು ಕ್ರಮ ತೆಗೆದುಕೊಂಡಿದ್ದಾರೆ. ನನ್ನನೂ ಸೇರಿದಂತೆ ಸಾರ್ವಜನಿಕ ಕ್ಷೇತ್ರದಲ್ಲಿರುವ ಮುಖಂಡರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವ, ವಂಚಿಸುವವರ ಬಗ್ಗೆ ಸಮಾಜ ಎಚ್ಚರದಿಂದರಬೇಕೆಂದು ವಿನಂತಿಸುವೆ ಎಂದು ಬಿವೈ ವಿಜಯೇಂದ್ರ ತಿಳಿಸಿದ್ದಾರೆ. … ’ : , 02, 2021 (..): ’ , .. ’ .. ’ . , ’ .. . .. , “ , . . - .”“ . , . ,” .: .. / ’ / / : - –- - - .