ಪ್ರಜ್ವಲ್ ಪೆನ್ ಡ್ರೈವ್ ಹಂಚಿಕೆ ಕೇಸ್: ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ. ಹಾಸನ,ಜೂನ್,1,2024 (..):ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ಗೌಡ , ಚೇತನ್ ಇಬ್ಬರು ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ 2ನೇ ಹೆಚ್ಚುವರಿ ಸಿವಿಲ್ ಜೆಎಂಎಫ್ ಸಿ ಕೋರ್ಟ್ ಆದೇಶ ಹೊರಡಿಸಿದೆ. ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆ ನವೀನ್ ಗೌಡ , ಚೇತನ್ಇಬ್ಬರನ್ನು ಇಂದು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು, ವಿಚಾರಣೆ ನಡೆಸಿದ ಕೋರ್ಟ್ ನವೀನ್ ಗೌಡ , ಚೇತನ್ ಗೆ 14 ದಿನ ನ್ಯಾಯಾಂಗ ಬಂಧನ ಆದೇಶ ಹೊರಡಿಸಿದೆ. ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಏಪ್ರಿಲ್ 23 ರಂದು ಹಾಸನದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿತ್ತು. ಈ ನಡುವೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣರನ್ನು ಎಸ್ ಐಟಿ ವಶದಲ್ಲಿದ್ದಾರೆ. : , , , 14 ,