ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ. ಬೆಂಗಳೂರು,ಜುಲೈ,2,2021(..):ಕೇರಳದಿಂದ‌ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕೇರಳದಿಂದ ಆಗಮಿಸುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದ್ದು, ಕರ್ನಾಟಕ ಪ್ರವೇಶಕ್ಕೆ ಆರ್ ಟಿಪಿಸಿಆರ್ ನೆಗೆಟೀವ್ ರಿಪೋರ್ಟ್ ಕಡ್ಡಾಯಗೊಳಿಸಲಾಗಿದೆ. ವಿಮಾನ, ರೈಲ್ವೆ ಹಾಗೂ ರಸ್ತೆ ಸಾರಿಗೆಯಲ್ಲಿ ಆಗಮಿಸುವವರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ. 72 ಗಂಟೆಯೊಳಗಿನ ನೆಗೆಟಿವ್ ವರದಿ ಇದ್ರೆ ಮಾತ್ರ ರಾಜ್ಯಕ್ಕೆ ಎಂಟ್ರಿ ಕೊಡಬಹುದು. ಕರ್ನಾಟಕ ಕೇರಳ ಗಡಿ ಭಾಗದ ಚೆಕ್ ಪೋಸ್ಟ್ ಗಳಲ್ಲಿ ಕಡ್ಡಾಯ ತಪಾಸಣೆಗೆ ಸೂಚನೆ ನೀಡಲಾಗಿದ್ದು, ದಿನನಿತ್ಯದ ಓಡಾಟ, ವಿದ್ಯಾಭ್ಯಾಸ, ವ್ಯಾಪಾರ ವಹಿವಾಟಿಗೆ ದಿನನಿತ್ಯ ಸಂಚರಿಸುವವರು 15 ದಿನಗಳಿಗೊಮ್ಮೆ ಆರ್ ಟಿಪಿಸಿಆರ್ ಟೆಸ್ಟ್ ಮಾಡಿಸಿಕೊಳ್ಳುವುದು ಕಡ್ಡಾಯಗೊಳಿಸಲಾಗಿದೆ. … , 02, 2021 (..): . . , , , . 72 . - . 15 , , .: / / / / : - - - – –