ಹೊಸ ವಿವಿ ಪ್ರಾರಂಭಿಸುವ ಕುರಿತು ಪರಿಶೀಲಿಸಿ ವರದಿ ನೀಡಲು ಪ್ರೊ. ಜಿ. ಹೇಮಂತ್ ಕುಮಾರ್ ನೇತೃತ್ವದ ಶಿಕ್ಷಣ ತಜ್ಞರ ಸಮಿತಿ ರಚನೆ. ಮೈಸೂರು,ಜೂನ್,28,2021(..):ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಕೇಂದ್ರದಲ್ಲಿ ಹೊಸ ವಿಶ್ವವಿದ್ಯಾಲಯವನ್ನು ಪ್ರಾರಂಭಿಸುವ ಕುರಿತು ಪರಿಶೀಲಿಸಿ ವರದಿ ನೀಡಲು ಮೈಸೂರು ವಿವಿ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್ ನೇತೃತ್ವದ ಶಿಕ್ಷಣ ತಜ್ಞರ ಸಮಿತಿ ರಚನೆ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಪ್ರಸ್ತುತ ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಕೇಂದ್ರವು ಕಾರ್ಯನಿರ್ವಹಿಸುತ್ತಿದ್ದು, ಸದರಿ ಸ್ನಾತಕೋತ್ತರ ಕೇಂದ್ರವನ್ನು ಮುಖ್ಯ ಆವರಣವನ್ನಾಗಿಸಿ ಹೊಸದಾಗಿ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಬಗ್ಗೆ ಪರಿಶೀಲಿಸುವುದು ಅವಶ್ಯವೆಂದು ಪರಿಗಣಿಸಿದ್ದು ಈ ಹಿನ್ನೆಲೆಯಲ್ಲಿ ಶಿಕ್ಷಣ ತಜ್ಞರ ಸಮಿತಿ ರಚಿಸಿ ಆದೇಶ ಹೊರಡಿಸಲಾಗಿದೆ. ಚಾಮರಾಜನಗರ ಜಿಲ್ಲೆಗೆ ಅನ್ವಯಿಸುವಂತೆ ಹೊಸದಾಗಿ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಬಗ್ಗೆ ಕೂಲಕಂಷವಾಗಿ ಪರಿಶೀಲಿಸಿ ವಿವರವಾದ ವರದಿ ನೀಡಲು ಶಿಕ್ಷಣ ತಜ್ಞರ ಸಮಿತಿಯನ್ನು ರಚಿಸಲಾಗಿದೆ. ತಜ್ಞರ ಸಮಿತಿಯಲ್ಲಿ ಮೈಸೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್, ಅಧ್ಯಕ್ಷರಾಗಿದ್ದು, ಮೈಸೂರು ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿಗಳಾದ ಪ್ರೊ. ವಿ.ಜಿ. ತಳವಾರ್‌, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿಗಳಾದ ಕೆಂಪರಾಜು ಸದಸ್ಯರಾಗಿದ್ದಾರೆ. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ನ ಕಾರ್ಯನಿರ್ವಾಹಕ ನಿರ್ದೇಶಕರಾದ ಪ್ರೊ. ಗೋಪಾಲಕೃಷ್ಣ ಜೋಷಿ ಸಂಚಾಲಕರಾಗಿದ್ದಾರೆ. … , 28, 2021 (..): . . , -, , . . . . .. .. , -, , , , . . , , .: / . . / / / : -- . - --