ದಲಿತ ಸಿಎಂ ಬಗ್ಗೆ ಶಾಸಕ ಯತೀಂದ್ರ ಸಿದ್ಧರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ. ಮೈಸೂರು,ಜೂನ್,27,2021(..):ಕಾಂಗ್ರೆಸ್ ಶಾಸಕ ಯತಿಂದ್ರ ಸಿದ್ದರಾಮಯ್ಯ ಹುಟ್ಟುಹಬ್ಬ ಹಿನ್ನಲೆ ಇಂದು ಮಂಗಳಮುಖಿಯರಿಗೆ ಆಹಾರ ಕಿಟ್ ವಿತರಣೆ ಮಾಡಲಾಯಿತು. ಶಾಸಕ ಯತೀಂದ್ರ ಸಿದ್ಧರಾಮಯ್ಯ ಅವರ ಅಭಿಮಾನಿಗಳಿಂದ ಮಂಗಳಮುಖಿಯರಿಗೆ ಆಹಾರ ಕಿಟ್ ವಿತರಣೆ ಮಾಡಲಾಯಿತು. ಬಳಿಕ ತಾಲೂಕು ರಾಷ್ಟೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಯತೀಂದ್ರ ಸಿದ್ಧರಾಮಯ್ಯ ಭಾಗಿಯಾದರು. ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸ್ಮರಣೆ ಮಾಡಲಾಯಿತು. ಬಳಿಕ ದಲಿತ ಸಿಎಂ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಯತಿಂದ್ರ ಸಿದ್ದರಾಮಯ್ಯ, ಮುಖ್ಯಮಂತ್ರಿ ಆಯ್ಕೆ ವಿಚಾರ ಅಪ್ರಸ್ತುತ. ಇನ್ನು ಚುನಾವಣೆಗೆ 2 ವರ್ಷ ಬಾಕಿ ಇದೆ. ಸಿದ್ದರಾಮಯ್ಯ ನವರು ಎಲ್ಲಿಯೂ ಸಹ ನಾನು ಮುಖ್ಯಮಂತ್ರಿ ಆಕಾಂಕ್ಷಿ ಎಂದು ಹೇಳಿಲ್ಲ. ಮೊದಲು ಪಕ್ಷವನ್ನ ಅಧಿಕಾರಕ್ಕೆ ತರಲು ಶ್ರಮಿಸೋಣ. ಬಿಜೆಪಿಯವರಿಗೆ ತಾಕತ್ತಿದ್ದರೆ ಅವರೇ ಮುಂದಿನ ಮುಖ್ಯಮಂತ್ರಿ ಘೋಷಣೆ ಮಾಡಲಿ ಎಂದು ಬಿಜೆಪಿಗೆ ಟಾಂಗ್ ನೀಡಿದರು. : - ’- – - .