ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಕೇಸ್: ನಾಲ್ವರು ಪೊಲೀಸರ ವಶಕ್ಕೆ. ಬೆಂಗಳೂರು,ಜೂನ್,25,2021(..):ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಕಾಟನ್ ಪೇಟೆ ಠಾಣೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಆರೋಪಿಗಳಿಗೆ ಸಹಾಯ ಮಾಡಿದ ಆರೋಪದ ಮೇಲೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆ ಆರೋಪಿಗಳ ಕುರಿತಾಗಿ ಪೋಲೀಸರಿಗೆ ಮಾಹಿತಿ ದೊರೆತಿದ್ದು, ಹತ್ಯೆಯ ಕಾರಣ ತಿಳಿಯಲು ಯತ್ನ ನಡೆಸಲಾಗಿದೆ. ಆರೋಪಿಗಳು ಸಿಕ್ಕಿಬಿದ್ದರೆ ಹತ್ಯೆಗೆ ಕಾರಣವೆನ್ನುವುದು ಗೊತ್ತಾಗಲಿದೆ. ಹಲವು ಆಯಾಮದಲ್ಲಿ ತನಿಖೆ ಮುಂದುವರಿಸಲಾಗಿದೆ. ಬಿಬಿಎಂಪಿ ಛಲವಾದಿ ಪಾಳ್ಯ ವಾರ್ಡ್ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನು ನಿನ್ನೆ ಬೆಳಗ್ಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. : – - - - .