ನನಗೂ ಶಾಸಕರ ಹೇಳಿಕೆಗೂ ಸಂಬಂಧ ಇಲ್ಲ ಎಂದ ಮಾಜಿ ಸಿಎಂ ಸಿದ್ಧರಾಮಯ್ಯ. ಬೆಂಗಳೂರು,ಜೂನ್,23,2021(..):ಸಿದ್ಧರಾಮಯ್ಯ ಮುಂದಿನ ಸಿಎಂ ಎಂಬ ಕಾಂಗ್ರೆಸ್ ಶಾಸಕರ ಹೇಳಿಕೆ ಕಾಂಗ್ರೆಸ್ ವಲಯದಲ್ಲಿ ಸಾಕಷ್ಟು ಗೊಂದಲ ಸೃಷ್ಠಿ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ಧರಾಮಯ್ಯ ನನಗೂ ಶಾಸಕರ ಹೇಳಿಕೆಗೂ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಸಿದ್ಧರಾಮಯ್ಯ, ನನಗೂ ಶಾಸಕರ ಹೇಳಿಕೆಗೂ ಸಂಬಂಧವಿಲ್ಲ. ಶಾಸಕರ ಹೇಳಿಕೆಗೆ ನಾನೇನು ಮಾಡಲು ಆಗಲ್ಲ ಎಂದಿದ್ದಾರೆ. ಹಾಗೆಯೇ ಹೇಳಿಕೆ ನೀಡಿದ ಶಾಸಕರ ಮೇಲೆ ಸಿದ್ಧರಾಮಯ್ಯ ಕ್ರಮ ತೆಗೆದುಕೊಳ್ಳುತ್ತಾರೆಂಬ ಡಿ.ಕೆ ಶಿವಕುಮಾರ್ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ ಸಿದ್ಧರಾಮಯ್ಯ, ಅವರೇನೋ ಹೇಳಿದ್ರೆ ನಾನೇನು ಮಾಡಲು ಆಗುತ್ತೆ..? ಎಂದು ಪ್ರಶ್ನಿಸಿದರು. ಸಿದ್ಧರಾಮಯ್ಯ ಸಿಎಂ ಆಗಬೇಕೆಂದು ಕಾಂಗ್ರೆಸ್ ಶಾಸಕರಾದ ಜಮೀರ್ ಅಹ್ಮದ್ ಖಾನ್, ರಾಘವೇಂದ್ರ ಹಿಟ್ನಾಳ್, ಭೀಮಾನಾಯ್ಕ್, ಕಂಪ್ಲಿ ಗಣೇಶ್, ಶಾಸಕ ರಾಮಪ್ಪ ಹೇಳಿಕೆ ನೀಡಿದ್ದಾರೆ. : - – –-