ನೀರಾವರಿ ಇಲಾಖೆಯಲ್ಲಿ ಕಿಕ್ ಬ್ಯಾಕ್ ಆರೋಪ: ಹೆಚ್.ವಿಶ್ವನಾಥ್ ವಿರುದ್ಧ ಸಚಿವ ಬಿ.ಸಿ ಪಾಟೀಲ್ ಕಿಡಿ. ಹಾವೇರಿ,ಜೂನ್,21,2021(..):ನೀರಾವರಿ ಇಲಾಖೆಯಲ್ಲಿ ಟೆಂಡರ್ ನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಗೆ ಕೃಷಿ ಸಚಿವ ಬಿ.ಸಿ ಪಾಟೀಲ್ ತಿರುಗೇಟು ನೀಡಿದ್ದಾರೆ. ಈ ಕುರಿತು ಹಾವೇರಿಯಲ್ಲಿ ಮಾತನಾಡಿದ ಕೃಷಿ ಸಚಿವ ಬಿ.ಸಿ ಪಾಟೀಲ್, ಹೆಚ್.ವಿಶ್ವನಾಥ್ ರದ್ಧು ಆಧಾರ ರಹಿತ ಆರೋಪ. ಆರೋಪ ಮಾಡುವವರಿಗೆ ಬೇರೆ ಕೆಲಸ ಇಲ್ಲ ಎಂದು ಕಿಡಿಕಾರಿದರು. ಇನ್ನು ಪಕ್ಷ ವಿರೋಧಿ ಹೇಳಿಕೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಇದು ರಾಜಕೀಯ ಮಾಡುವ ಸಮಯವಲ್ಲ. ರಾಜಕೀಯಕ್ಕಾಗಿ ಪ್ರತ್ಯೇಕ ಸಮಯ ಮೀಸಲಿಡೋಣ. ಮೊದಲು ಕೊರೋನಾ 3ನೇ ಅಲೆ ಬಗ್ಗೆ ಯೋಚನೆ ಮಾಡಬೇಕಿದೆ ಎಂದು ತಿಳಿಸಿದರು. : –- - - - - .