ದೇಶದಲ್ಲಿ ಮತ್ತಷ್ಟು ಕೊರೋನಾ ಸೋಂಕು ಇಳಿಕೆ. ನವದೆಹಲಿ,ಜೂನ್,21,2021(..):ಹಲವು ರಾಜ್ಯಗಳು ಕೊರೊನಾ ತಡೆಗಟ್ಟಲು ಲಾಕ್ ಡೌನ್ ವಿಧಿಸಿದ್ದು ಈ ಹಿನ್ನೆಲೆಯಲ್ಲಿ ದೇಶದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದೆ. ಈ ನಡುವೆ ಕಳೆದ 24 ಗಂಟೆಯಲ್ಲಿ 53,256 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದು ಕಳೆದ 88 ದಿನಗಳಲ್ಲೇ ಕನಿಷ್ಠ ಪ್ರಮಾಣದ್ದಾಗಿದೆ. ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಒಂದೇ ದಿನದಲ್ಲಿ ದೇಶದಲ್ಲಿ 53,256 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ತಗುಲಿದ್ದು ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 2,99,35,221ಕ್ಕೆ ಏರಿಕೆಯಾಗಿದೆ. ಅಂತೆಯೇ ಕಳೆದ 24 ಗಂಟೆಗಳಲ್ಲಿ 1,422 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು ಆ ಮೂಲಕ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 3,88,135ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 78,190 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 2,88,44,199ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 7,02,887 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. …. -19 88 , 21, 2021 (..): -19 . , 53,526 24 , 88 . 2,99,35,221. 1,422 24 3,88,135.78,190 24 2,88,44,199. 7,02,887 .: -19 / 24 / : - – - .