ಮೋದಿ ಆಪ್ತ ವಲಯದ ಅಧಿಕಾರಿ: ಕೇಂದ್ರ ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಕೋವಿಡ್ ಗೆ ಬಲಿ ಬೆಂಗಳೂರು, ಜೂನ್ 19, 2021 (..):ಕೇಂದ್ರ ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಗುರುಪ್ರಸಾದ್ ಮೊಹಪಾತ್ರ ಕೋವಿಡ್ ಗೆ ಬಲಿಯಾಗಿದ್ದಾರೆ. ಏಪ್ರಿಲ್ ನಲ್ಲಿ ಗುರುಪ್ರಸಾದ್ ಮೊಹಪಾತ್ರ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹಲವು ದಿನಗಳಿಂದ ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಮೊಹಪಾತ್ರ 1986ರ ಬ್ಯಾಚ್ ನ ಗುಜರಾತ್ ಕೇಡರ್ ನ ಐಎಎಸ್ ಅಧಿಕಾರಿಯಾಗಿದ್ದರು. ಗುಜರಾತ್ ನಲ್ಲಿ ನರೇಂದ್ರ ಮೋದಿ ಜೊತೆಯಲ್ಲಿಯೂ ಕಾರ್ಯನಿರ್ವಹಿಸಿದ್ದರು. ಗುರುಪ್ರಸಾದ್ ಮೊಹಪಾತ್ರ ನಿಧನಕ್ಕೆ ಪ್ರಧಾನಿ ಮೋದಿ, ಕೇಂದ್ರ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.