ನಂಜನಗೂಡಿನಲ್ಲಿ ಸಿಎಂ ಪುತ್ರ ವಿಜಯೇಂದ್ರ ಪೂಜೆ: ಕಠಿಣ ಕ್ರಮಕ್ಕೆ ಹೈಕೋರ್ಟ್ ಸೂಚನೆ. ಬೆಂಗಳೂರು,ಜೂನ್,18,2021(..):ಮಾರ್ಗಸೂಚಿ ಉಲ್ಲಂಘಿಸಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ನಂಜನಗೂಡಿನಲ್ಲಿ ಪೂಜೆ ಸಲ್ಲಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಸೂಚನೆ ನೀಡಿದೆ. ನಿಯಮ ಉಲ್ಲಂಘಿಸಿ ನಂಜನಗೂಡು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಪುತ್ರ ವಿಜಯೇಂದ್ರ ವಿರುದ್ಧದ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯಿತು. ವಿಜಯೇಂದ್ರ ದೇವಾಲಯ ಪ್ರವೇಶಿಸಿದ್ದಾಗಿ ಹಾಗೂ ವಿಶೇಷ ದರ್ಶನಕ್ಕೆ ಅವಕಾಶ ನೀಡಿರಲಿಲ್ಲವೆಂದು ವರದಿ ಸಲ್ಲಿಕೆಯಾಗಿದೆ. ವಿಜಯೇಂದ್ರ ಉದ್ದೇಶಪೂರ್ವಕವಾಗಿ ಭೇಟಿ ನೀಡಿರಲಿಲ್ಲ. ಪೂಜೆ ವೇಳೆ ಅರ್ಚಕರು ಕರೆದರೆಂದು ಹೋಗಿದ್ದಾರೆ. ಕೇವಲ ಐದು ಹತ್ತು ನಿಮಿಷವಷ್ಟೇ ಇದ್ದರು ಎಂದು ಹೈಕೋರ್ಟ್ ಗೆ ಎಜಿ ಪ್ರಭುಲಿಂಗ್ ನಾವದಗಿ ಸ್ಪಷ್ಟನೆ ನೀಡಿದರು. ಬ್ಯಾನ್ ಇದ್ದರೂ ಜನರು ದೇವಾಲಯಕ್ಕೆ ಹೋಗಬಹುದೇ..? ಹಾಗಿದ್ದರೆ ಜನಸಾಮಾನ್ಯರಿಗೂ ಆ ಅವಕಾಶ ನೀಡಿ. ಅರ್ಚಕರದಷ್ಟೇ ಹೊಣೆಯೇ, ಹೋದವರದ್ದಲ್ಲವೇ ಎಂದು ಸರ್ಕಾರಕ್ಕೆ ಹೈಕೋರ್ಟ್ ಸಿಜೆ. ಎ.ಎಸ್.ಒಕಾ ನೇತೃತ್ವದ ಪೀಠ ಪ್ರಶ್ನೆಸಿತು. ಈ ವೇಳೆ ಉತ್ತರಿಸಿದ ಹೈಕೋರ್ಟ್ ಗೆ ಅಡ್ವೊಕೆಟ್ ಜನರಲ್, ರಾಜಕಾರಣಿಗಳಿಗೂ ಹೆಚ್ಚು ಹೊಣೆಗಾರಿಕೆಯಿರುತ್ತದೆ. ವಿಜಯೇಂದ್ರರಿಂದಲೂ ಕೋರ್ಟ್ ವಿವರಣೆ ಪಡೆಯಬಹುದು ಎಂದು ತಿಳಿಸಿದರು. ಈ ಪ್ರಕರಣ ಸಂಬಂಧಪಟ್ಟವರೆಲ್ಲರ ಕಣ್ತೆರೆಸಬೇಕು. ಅಧಿಕಾರಿಗಳು, ರಾಜಕಾರಣಿಗಳಿಗೆ ಅರಿವಾಗಬೇಕು. ಸಾರ್ವಜನಿಕರಿಗೆ ದೇವಾಲಯ ಪ್ರವೇಶವಿಲ್ಲವೆಂದರೆ ಇಲ್ಲ. ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮುಜರಾಯಿ ಇಲಾಖೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿತು. … ’ : , 18, 2021 (..): ’ .. ’ , . ’ . ’ , “ . . . 5 10 .” .. ? ? ’ ? , ’ . ’ - , . . .: .. / / / : ’- - - –- - .