ಫೋನ್ ಕದ್ಧಾಲಿಕೆ ಆರೋಪ: ಸಮಗ್ರ ಉನ್ನತ ತನಿಖೆಗೆ ರಾಜ್ಯ ಕಾಂಗ್ರೆಸ್ ಆಗ್ರಹ. ಬೆಂಗಳೂರು,ಜೂನ್,18,2021(..):ಬಿಜೆಪಿ ಶಾಸಕ ಅರವಿಂದ್ ಬೆಲ್ಲದೆ ನನ್ನ ಫೋನ್ ಟ್ಯಾಪ್ ಮಾಡಲಾಗುತ್ತಿದೆ. ನನ್ನನ್ನ ಫಾಲೋ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೆ ಈ ಬಗ್ಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೂ ದೂರು ನೀಡಿರುವುದಾಗಿ ತಿಳಿಸಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಉನ್ನತ ತನಿಖೆಗೆ ಆಗ್ರಹಿಸಿದೆ. ಸ್ವತಃ ಆಡಳಿತ ಪಕ್ಷದ ಶಾಸಕರಿಂದಲೇ ಫೋನ್ ಕದ್ದಾಲಿಕೆ ಬಗ್ಗೆ ಆರೋಪ ಕೇಳಿ ಬಂದಿದೆ, ಸಿಎಂ ರಾಜೀನಾಮೆ ಕೊಟ್ಟಂತಹ ಇತಿಹಾಸ ಹೊಂದಿರುವ ಗಂಭೀರ ಆರೋಪ ಇದು. ರಮೇಶ್ ಜಾರಕಿಹೊಳಿ ಪ್ರಕರಣದಲ್ಲೂ ವಕೀಲರ ಫೋನ್ ಕದ್ದಾಲಿಕೆಯಾಗಿದೆ. ಈ ಬಗ್ಗೆ ಸಮಗ್ರವಾಗಿ ಉನ್ನತ ತನಿಖೆಯಾಗಬೇಕು ಎಂದು ರಾಜ್ಯ ಕಾಂಗ್ರೆಸ್ ಒತ್ತಾಯಿಸಿ, ಈ ಸರ್ಕಾರ ಮಾಡಬೇಕಾದ ಕೆಲಸ ಬಿಟ್ಟು ಮಾಡಬಾರದ್ದೆಲ್ಲವನ್ನೂ ಮಾಡುತ್ತಿದೆ ಎಂದು ಟೀಕಿಸಿದೆ. : - - - -.