ರಾಜ್ಯ ವಿಧಾನ ಮಂಡಲ ಅಧಿವೇಶನ ಕರೆಯಲು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗ್ರಹ. ಬೆಂಗಳೂರು,ಜೂನ್,18,2021(..):ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಲು ರಾಜ್ಯ ವಿಧಾನ ಮಂಡಲ ಅಧಿವೇಶನ ಕರೆಯುವಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕೊರೋನಾ 2ನೇ ಅಲೆ ಹಿನ್ನೆಲೆ ಜನ ಸಂಕಷ್ಟಕ್ಕಿಡಾಗಿದ್ದಾರೆ. ರಾಜ್ಯದ ಹಲವು ಕುಟುಂಬಗಳು ಬೀದಿಗೆ ಬಿದ್ದಿವೆ. ರೈತರ ಕುಟುಂಬಗಳು ಬೀದಿಗೆ ಬಿದ್ದಿದೆ. ಮಾವು, ಬಾಳೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಎಲ್ಲಾ ವಿಚಾರಗಳ ಬಗ್ಗೆ ಚರ್ಚಿಸಲು ವಿಧಾನ ಮಂಡಲ ಅಧಿವೇಶನ ಕರೆಯಿರಿ ಎಂದು ಒತ್ತಾಯಿಸಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಗೊಂದಲ ದುರದೃಷ್ಟಕರ. ಬಿಜೆಪಿ ಶಾಸಕರಲ್ಲಿ ಹೊಂದಾಣಿಕೆ ಇಲ್ಲ. ಸಿಎಂ ಆಗಲು ಕೆಲವರು ಸೂಟು ಹೊಲೆಸಿಕೊಂಡಿದ್ದಾರೆ ಎಂದು ಹೆಚ್.ಡಿಕೆ ಹೇಳಿದರು. : - – –