ಸಭೆಯಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಯಾಗಿಲ್ಲ- ಕೃಷಿ ಸಚಿವ ಬಿ.ಸಿ ಪಾಟೀಲ್. ಬೆಂಗಳೂರು,ಜೂನ್,17,2021(..):ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಜತೆಗಿನ ಸಭೆಯಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಯಾಗಿಲ್ಲ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಸ್ಪಷ್ಟನೆ ನೀಡಿದರು. ಈ ಬಗ್ಗೆ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಬಿ.ಸಿ ಪಾಟೀಲ್, ಅರುಣ್ ಸಿಂಗ್ ಸಚಿವರಿಗೆ ಕೆಲವು ಸೂಚನೆಗಳನ್ನು ನೀಡಿದ್ದಾರೆ. ಇಲಾಖೆಗಳಲ್ಲಿ ಹೊಸ ಹೊಸ ಕಾರ್ಯಕ್ರಮಗಳನ್ನ ತರುವಂತೆ ಸೂಚಿಸಿದ್ದಾರೆ. ಇಲಾಖಾವಾರು ಉತ್ತಮವಾಗಿ ಕೆಲಸ ಮಾಡುವಂತೆ ಸೂಚಿಸಿದ್ದಾರೆ ಎಂದರು. : - – – –- .