ದೇಶದಲ್ಲಿ ಒಂದೇ ದಿನ 70,421 ಕೋವಿಡ್ ಪಾಸಿಟಿವ್ ಕೇಸ್ ಪತ್ತೆ. ನವದೆಹಲಿ,ಜೂನ್,14,2021(..):ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಇಳಿಕೆ ಕಂಡಿದ್ದು,. ಕಳೆದ 24 ಗಂಟೆಯಲ್ಲಿ 70,421 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,95,10,410ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 3921 ಮಂದಿ ಕೊರೋನಾಗೆ ಬಲಿಯಾಗಿದ್ದು ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,74,305ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 9,73,158 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,81,62,947 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,19,501 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 25,48,49,301 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. : 70,421 - - - – – .