ಕೆರೆಗೆ ಹಾರಿ ನಗರ ಶಸ್ತ್ರಾಸ್ತ್ರ ಮೀಸಲು ಪಡೆ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ. ಮೈಸೂರು,ಜೂನ್,12,2021(..):ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ವರುಣ ಕೆರೆಗೆ ಹಾರಿ ನಗರ ಶಸ್ತ್ರಾಸ್ತ್ರ ಮೀಸಲು ಪಡೆ() ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪೊಲೀಸ್ ಕಾನ್ಸ್ ಟೇಬಲ್ ಮೋಹನ್ ( 197) ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದವರು. ಮೃತ ಮೋಹನ್, 2008 ನೇ ಬ್ಯಾಚ್ ನ ಸಿಬ್ಬಂದಿ. ಸದ್ಯ ಅವರು ಬಾಂಬ್ ಸ್ವಾಡ್ ವಿಭಾಗದಲ್ಲಿ ಕೆಲಸ ನಿರ್ವಹಣೆ ಮಾಡುತ್ತಿದ್ದರು ಎಂದು ಪೊಲೀಸ್ ಮೂಲಗಳಿಂದ ಮಾಹಿತಿ. ಆದರೆ, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. : - - -