ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ. ಚಿತ್ರದುರ್ಗ,ಜೂನ್,12,2021(..):ದೇಶದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಶತಕದಾಟಿದ್ದು, ತೈಲಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಚಿತ್ರದುರ್ಗದ ಹಿರಿಯೂರು ಪಟ್ಟಣದ ಮುಖ್ಯರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಬಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ತೈಲಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಡಿ.ಕೆ ಶಿವಕುಮಾರ್ ಗೆ ಚಳ್ಳೇಕೆರೆ ಶಾಸಕ ರಘುಮೂರ್ತಿ, ಮಾಜಿ ಶಾಸಕ ಡಿ.ಸುಧಾಕರ್ ಸಾಥ್ ನೀಡಿದರು. ಕಾಂಗ್ರೆಸ್‌ ಪಕ್ಷವು ದೇಶಾದ್ಯಂತ ಪೆಟ್ರೋಲ್‌ ಡೀಸೆಲ್‌ ಬೆಲೆ ಏರಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸುವಂತೆ ಕರೆ ನೀಡಿರುವ ಹಿನ್ನೆಲೆ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ, ಕನಕಪುರದಲ್ಲಿ ಕಾಂಗ್ರೆಸ್‌ ಮುಖಂಡರು ಹಾಗೂ ಯೂತ್‌ ಕಾಂಗ್ರೆಸ್‌ನ ಪದಾಧಿಕಾರಿಗಳು ಒಟ್ಟಾಗಿ ತಮ್ಮ ಪ್ರದೇಶದಲ್ಲಿ ಇರುವ ಪೆಟ್ರೋಲ್‌ ಬಂಕ್‌ಗಳ ಮುಂದೆ ಪ್ರತಿಭಟನೆ ನಡೆಸಿದರು. : –- - -