ಹಿರಿಯ ಕವಿ, ಡಾ. ಸಿದ್ಧಲಿಂಗಯ್ಯ ಇನ್ನಿಲ್ಲ. ಬೆಂಗಳೂರು,ಜೂನ್,11,2021(..): ಕೊರೋನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಕವಿ, ಸಾಹಿತಿ ಡಾ.ಸಿದ್ದಲಿಂಗಯ್ಯ(67) ಚಿಕಿತ್ಸೆ ಫಲಕಾರಿಯಾಗದೇ, ಮೃತಪಟ್ಟಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಸಾಹಿತಿ ಡಾ.ಸಿದ್ಧಲಿಂಗಯ್ಯ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಸಿದ್ಧಲಿಂಗಯ್ಯ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಸಾಹಿತಿ ಸಿದ್ಧಲಿಂಗಯ್ಯ ಅವರು ಇಂದು ನಿಧನರಾಗಿದ್ದಾರೆ. ಈ ಮೂಲಕ ಕನ್ನಡ ಸಾಹಿತ್ಯ ಲೋಕದ ಕೊಂಡಿಯೊಂದು ಕಳಚಿದಂತೆ ಆಗಿದೆ. ದಲಿತ ಕವಿ ಎಂದೇ ಪ್ರಸಿದ್ಧಿಯಾಗಿದ್ದ ಸಿದ್ಧಲಿಂಗಯ್ಯ ಅವರು 81ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. : - .- -