ಮೈಸೂರು ವಿವಿ ಪರೀಕ್ಷೆ ಅಕ್ರಮ ಆರೋಪ: 6 ಮಂದಿ ವಿರುದ್ಧ ಪ್ರಕರಣ ದಾಖಲು- ಪೊಲೀಸ್ ಆಯುಕ್ತ ಚಂದ್ರಗುಪ್ತ. ಮೈಸೂರು,ಜೂನ್,10,2021(..):ಮೈಸೂರು ವಿಶ್ವ ವಿದ್ಯಾನಿಲಯ ಪರೀಕ್ಷೆ ಅಕ್ರಮ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಸೋಮಸುಂದರ್ ಎಂಬುವವರಿಂದ ದೂರು ಬಂದಿತ್ತು. ಹೀಗಾಗಿ ನಿನ್ನೆ ರಾತ್ರಿ 6 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ ತಿಳಿಸಿದರು. ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಮೈಸೂರು ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ, ಬಿಎಸ್ಸಿ ಕೆಮಿಸ್ಟ್ರಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಮಂಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ರು. ಈ ವೇಳೆ ಸಾಕ್ಷ್ಯನಾಶಪಡಿಸಿ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆದಿತ್ತು ಎಂಬ ಆರೋಪ ಕೇಳಿಬಂದಿದೆ. ಸೋಮಸುಂದರ್ ಎಂಬುವವರ ದೂರಿನನ್ವಯ ಪ್ರಕರಣ ದಾಖಲಿಸಿದ್ದೇವೆ. ಮಂಡಿ ಠಾಣೆ ಇನ್ಸ್ ಪೆಕ್ಟರ್ ನಾರಾಯಣ ಸ್ವಾಮಿಯನ್ನು ಅಮಾನತಿನಲ್ಲಿಟ್ಟು ತನಿಖೆ ಮಾಡುತ್ತೇವೆ. ಪ್ರತ್ಯೇಕ ಪೊಲೀಸ್ ಠಾಣೆಯ ಸಿಬ್ಬಂದಿಯಿಂದ ಈ ಕುರಿತು ತನಿಖೆ ನಡೆಸುತ್ತೇವೆ ಎಂದು ಪೊಲೀಸ್ ಆಯುಕ್ತ ಚಂದ್ರಗುಪ್ತ ಹೇಳಿದರು. : -- - - – - 6 - -.