ದೇಶದಲ್ಲಿ ಒಂದೇ ದಿನ 94,052 ಮಂದಿಗೆ ಕೊರೊನಾ ಸೋಂಕು. ನವದೆಹಲಿ,ಜೂನ್,10,2021(..):ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 94,052 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 94,052 ಜನರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 2,91,83,121ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 6148 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಕೊರೊನಾ ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 3,59,676 ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ 1,51,367 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿ ಈವರೆಗೆ 2,76,55,493 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ದೇಶದಲ್ಲಿ 11,67,952 ಸಕ್ರಿಯ ಪ್ರಕರಣಗಳಿವೆ. : - -94,052 –