ರೋಹಿಣಿ ವರ್ಗಾವಣೆಗೆ ಭೂ ಮಾಫಿಯ ಕಾರಣ : ತನಿಖೆಗೆ ಸಿದ್ದರಾಮಯ್ಯ ಆಗ್ರಹ. ಬೆಂಗಳೂರು, ಜೂ.08, 2021 : (.. ) ಮೈಸೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಐಎಎಸ್ ಅಧಿಕಾರಿಗಳ ನಡುವಣ ಕಿತ್ತಾಟಕ್ಕೆ ಮೈಸೂರಿನಲ್ಲಿ ನಡೆದಿದೆ ಎನ್ನಲಾದ ಭೂ ಹಗರಣ ಕಾರಣ ಎನ್ನಲಾಗುತ್ತಿದೆ. ಆದ್ದರಿಂದ ಈ ಹಗರಣದ ಬಗ್ಗೆ ಸರಕಾರ ಸ್ವತಂತ್ರ ಸಂಸ್ಥೆ ಮೂಲಕ ತನಿಖೆ ನಡೆಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿಂದ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಹೇಳಿದಿಷ್ಟು.. ಮೈಸೂರು ಮಹಾ ನಗರ ಪಾಲಿಕೆಯ ಆಯುಕ್ತರಾಗಿದ್ದ ಶಿಲ್ಪಾ ನಾಗ್ ಮತ್ತು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರ ನಡುವಣ ಜಗಳಕ್ಕೆ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಶಾಸಕರು ಹಾಗೂ ಜೆಡಿಎಸ್‍ ಶಾಸಕ ಸಾ.ರಾ. ಮಹೇಶ್ ಕಾರಣ. ಮೊದಲಿಗೆ ಒರ್ವ ಐಎಎಸ್ ಅಧಿಕಾರಿಯನ್ನು ಬಿಜೆಪಿಯವರು ಬೆಂಬಲಿಸಿದರು. ಅದರಲ್ಲೂ ಸಂಸದ ಪ್ರತಾಪ್ ಸಿಂಹ, ಮೊದಲು ಡಿಸಿ ರೋಹಿಣಿ ಸಿಂಧೂರಿ ಪರ ಇದ್ದರು. ಬಳಿಕ ದಿಢೀರನೆ ವಿರೋಧ ಮಾಡಲು ಶುರು ಮಾಡಿದರು. ಇದೇ ವೇಳೆ ಮತ್ತೊರ್ವ ಐಎಎಸ್ ಅಧಿಕಾರಿ ಶಿಲ್ಪನಾಗ್ ರನ್ನು ಹೊಗಳಲು ಶುರು ಮಾಡಿದರು. ಆ ಮೂಲಕ ಈ ಇಬ್ಬರು ಐಎಎಸ್ ಅಧಿಕಾರಿಗಳನ್ನು ಪರಸ್ಪರ ಎತ್ತಿ ಕಟ್ಟಿದವರೇ ಬಿಜೆಪಿ ಸಂಸದ, ಶಾಸಕರು. ಇಂಥ ಸಂದರ್ಭದಲ್ಲಿ ಜಿಲ್ಲಾ ಮಂತ್ರಿ ಸೋಮಶೇಖರ್ ಏನು ಮಾಡುತ್ತಿದ್ದರು. ಇದು ಅವರ ವೈಫಲ್ಯ ಅಲ್ಲವೇ ? ಎಂದು ಪ್ರಶ್ನಿಸಿದರು. ಪತ್ರಿಕಾಗೋಷ್ಠಿ ಕರೆದು ಮಾತನಾಡಲು ಅಧಿಕಾರಿಗೆ ಅನುಮತಿ ನೀಡಿದವರು ಯಾರು ? ಅನುಮತಿ ಇಲ್ಲದೆ ಪತ್ರಿಕಾಗೋಷ್ಠಿ ಕರೆಯಲು ಅವಕಾಶ ಇಲ್ಲ. ವರ್ಗಾವಣೆ ಶಿಕ್ಷೆ ಅಲ್ಲ. ಸರಕಾರ ಈ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಆದರೆ, ಸರಕಾರವೇ ಶಕ್ತಿ ಕಳೆದುಕೊಂಡಿದೆ. ಆಡಳಿತವೇ ಇಲ್ಲದಂತೆ ಆಗಿರುವುದರಿಂದ ಅಧಿಕಾರಿಗಳು ಬೀದಿಗೆ ಬರಲು ಕಾರಣ ಎಂದರು. ‘ ಭೂ ಹಗರಣದ ತನಿಖೆಗೆ ಮುಂದಾಗಿದ್ದೇ ನನ್ನ ವರ್ಗಾವಣೆಗೆ ಕಾರಣ’ ಎಂದು ಡಿಸಿಯಾಗಿದ್ದ ರೋಹಿಣಿ ಸಿಂಧೂರಿ ಹೇಳಿದ್ದಾರೆ. ಆ ಹಗರಣದ ಯಾವುದು ಎಂಬ ಬಗ್ಗೆ ತನಿಖೆ ಆಗಬೇಕು. ಯಾವ ಯಾವ ರಾಜಕಾರಣಿಗಳ ಭೂ ಹಗರಣಗಳಿವೆ. ಈ ವಿಷಯದಲ್ಲಿ ಯಾರ್ಯಾರು ಅಧಿಕಾರಿಗಳನ್ನು ಬಳಸಿಕೊಳ್ಳುವ ಪ್ರಯತ್ನ ಮಾಡಿದರು ಎಂಬುದು ತನಿಖೆಯಿಂದ ಹೊರಬರಬೇಕು ಎಂದು ಒತ್ತಾಯಿಸಿದರು. ಶಿಲ್ಪನಾಗ್ ಡಿಸಿ ಮಾಡಲು ಯತ್ನಿಸಿದ್ದರು: ಬಿಜೆಪಿಯ ಸಂಸದ, ಶಾಸಕರು ಜಿಲ್ಲಾಧಿಕಾರಿ ಹುದ್ದೆಯಲ್ಲಿ ಶಿಲ್ಪಾ ನಾಗ್ ಅವರನ್ನು ಕೂರಿಸುವ ಪ್ರಯತ್ನ ಮಾಡುತ್ತಿದ್ದರು. ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿಯನ್ನು ಬಿಜೆಪಿ ನಾಯಕರು ಬಹಿರಂಗವಾಗಿಯೇ ಟೀಕಿಸುತ್ತಾ, ಪಾಲಿಕೆ ಆಯುಕ್ತೆಯಾಗಿದ್ದ ಶಿಲ್ಪನಾಗ್ ರನ್ನು ಮಾತುಮಾತಿಗೂ ಹೊಗಳಿ ಅಟ್ಟಕ್ಕೇರಿಸುತ್ತಿದ್ದದ್ದೇ ಇದಕ್ಕೆ ಸಾಕ್ಷಿ. ಈ ಷಡ್ಯಂತ್ರ ವಿಫಲವಾದಾಗ ಇಬ್ಬರೂ ಅಧಿಕಾರಿಗಳನ್ನು ಪರಸ್ಪರ ಎತ್ತಿ ಕಟ್ಟಿದರು. ಅವರ ನಡುವೆ ಮನಸ್ತಾಪ ತಂದಿಟ್ಟರು. ಬಿಗಿಯಾದ ಸರಕಾರ ಇಲ್ಲದೇ ಇದ್ದರೆ ಈ ರೀತಿಯ ಅನಾಹುತಗಳಿಗೆ ದಾರಿ ಆಗುತ್ತದೆ. ಹುಚ್ಚು ಮುಂಡೆ ಮದುವೆಯಲ್ಲಿ ಉಂಡವನೇ ಜಾಣ ಎಂಬಂತೆ ಆಗಿದೆ ರಾಜ್ಯ ಸರಕಾರದ ಪರಿಸ್ಥಿತಿ ಎಂದು ಲೇವಡಿ ಮಾಡಿದರು. ರಾಜಕಾರಣಿಗಳು ಅಧಿಕಾರಿಗಳನ್ನು ಬೆಂಬಲಿಸುವ ಅಥವಾ ವಿರೋಧಿಸುವ ಕೆಲಸ ಮಾಡಬಾರದು. ಅವರನೇದಿದ್ದರು ಜನಪರ ಕಾರ್ಯಗಳನ್ನು ಮಾತ್ರ ಮಾಡಬೇಕು ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. : - . . “ , . . , , , . , . . . , . - ? ?” .“ ? ’ . . . ’ . - ,” ., ’ . , . , . : / / / / / /