ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ ಸಿಎಂ ಯಡಿಯೂರಪ್ಪಹೇಳಿಕೆ ಬೆಂಗಳೂರು, ಜೂನ್ 06, 2021 (..): ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುತ್ತೇನೆ ಎಂದು ಹೇಳುವ ಮೂಲಕ ಸಿಎಂ ಸಂಚಲನ ಮೂಡಿಸಿದ್ದಾರೆ. ಬಿಜೆಪಿ ಹೈಕಮಾಂಡ್ ಗೆ ನನ್ನ ಮೇಲೆ ವಿಶ್ವಾಸವಿರುತ್ತೋ ಅಲ್ಲಿಯವರೆಗೆ ಮುಖ್ಯಮಂತ್ರಿ ಪದವಿಯಲ್ಲಿ ಮುಂದುವರಿಯುತ್ತೇನೆ, ನನ್ನ ಶಕ್ತಿಮೀರಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಮುಂದೆಯೂ ರಾಜ್ಯದ ಜನತೆಯ ಒಳಿತಿಗಾಗಿ ಕೆಲಸ ಮಾಡುತ್ತೇನೆ, ಈ ವಿಷಯದಲ್ಲಿ ನನಗೆ ಯಾವುದೇ ಗೊಂದಲವಿಲ್ಲ ಎಂದು ವಿಧಾನಸೌಧದಲ್ಲಿ ತಿಳಿಸಿದ್ದಾರೆ.