ಹುದ್ದೆಗೆ ರಾಜೀನಾಮೆ ನೀಡಿದ ಮರು ದಿನವೇ ರಜೆ ಕೋರಿ ಪತ್ರ ಬರೆದ ಪಾಲಿಕೆ ಆಯುಕ್ತೆ ಶಿಲ್ಪನಾಗ್ ..! ಮೈಸೂರು, ಜೂ.05, 2021 : (.. ):ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಅಸಮಧಾನಗೊಂಡು ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಮೈಸೂರು ನಗರ ಪಾಲಿಕೆ ಆಯುಕ್ತೆ ಶಿಲ್ಪನಾಗ್ , ಇದೀಗ ರಜೆ ಮೇಲೆ ತೆರಳಿರುವ ಅಂಶ ಬೆಳಕಿಗೆ ಬಂದಿದೆ. ಜೂ. 4 ರಂದು ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಪಾಲಿಕೆ ಆಯುಕ್ತೆ ಶಿಲ್ಪನಾಗ್, ಜೂ. 5 ರಂದು ಒಂದು ದಿನದ ಸಾಂದರ್ಭಿಕ ರಜೆ ಮಂಜೂರು ಮಾಡಲು ಕೋರಿದ್ದಾರೆ. ಜತೆಗೆ ಜೂ.6 ರ ಸಾರ್ವತ್ರಿಕ ರಜೆ ಉಪಯೋಗಿಸಿಕೊಂಡು ಕೇಂದ್ರ ಸ್ಥಾನ ಬಿಡಲು ಅನುಮತಿ ನೀಡುವಂತೆ ಕೋರಿದ್ದಾರೆ. ಇದೇ ವೇಳೆ ರಜೆ ಅವಧಿಯಲ್ಲಿ ಪಾಲಿಕೆ ಹೆಚ್ಚುವರಿ ಆಯುಕ್ತರಾದ ಶಶಿಕುಮಾರ್ ನಿರ್ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.ಜೂ. 3 ರಂದು ಮಧ್ಯಾಹ್ನ ನಗರ ಪಾಲಿಕೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಮಾನಸಿಕ ಕಿರುಕುಳದ ಆರೋಪ ಮಾಡಿದ್ದರು. ಜತೆಗೆ ಈ ಕಾರಣಕ್ಕೆ ಬೇಸತ್ತು ನಾನು ಐಎಎಸ್ ಹುದ್ದೆಗೆ ರಾಜೀನಾಮೆ ನೀಡುವೆ ಎಂದು ರಾಜೀನಾಮೆ ಪತ್ರವನ್ನು ಮಾಧ್ಯಮಗಳ ಮುಂದೆ ಓದಿದ್ದರು.ಇದೀಗ, ರಾಜೀನಾಮೆ ನೀಡಿದ ಮರು ದಿನವೇ ಅಂದರೆ, ಜೂ.4 ರಂದೇ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದು ರಜೆ ಮಂಜೂರಿಗೆ ಮನವಿ ಮಾಡಿದ್ದಾರೆ. : ----.-----