ದೇಶದಲ್ಲಿ ಇಳಿಕೆಯಾಗುತ್ತಿರುವ ಕೊರೋನಾ ಸೋಂಕು. ನವದೆಹಲಿ,ಜೂನ್,5,2021(..):ದೇಶದ ಹಲವು ರಾಜ್ಯಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ನಂತಹ ಕಠಿಣ ಕ್ರಮಕೈಗೊಂಡಿದ್ದು ಈ ಹಿನ್ನೆಲೆಯಲ್ಲಿ ದೇಶದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದೆ. 3 ಲಕ್ಷದಾಟುತ್ತಿದ್ದ ದಿನದ ಪ್ರಕರಣ ಇದೀಗ ಇಳಿಕೆಯತ್ತ ಸಾಗಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,20,529 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,86,94,879ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಕೊರೋನಾ ಸೋಂಕಿಗೆ 3,380 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,44,082ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 15,55,248 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,67,95,549 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,97,894 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. : - – –