ವಿಮಾನದ ಟಿಕೆಟ್ ಕಾಯ್ದಿರಿಸಿದ ಪ್ರಜ್ವಲ್..! , , 31. ಬೆಂಗಳೂರು, ಮೇ.29,2024: (..) ಮೇ 31ರಂದು ಬೆಂಗಳೂರಿಗೆ ಬರಲು ವಿಮಾನದ ಟಿಕೆಟ್ ಕಾಯ್ದಿರಿಸಿರಿಸಿದ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ , ಹಾಸನ ಸಂಸದ ಪ್ರಜ್ವಲ್ ರೇವಣ್ಣ. ಇತ್ತೀಚೆಗಷ್ಟೇ ವಿಡಿಯೊ ಬಿಡುಗಡೆ ಮಾಡಿದ್ದ ಪ್ರಜ್ವಲ್, ಎಸ್‌ಐಟಿ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದ. ಈ ಹಿನ್ನೆಲೆಯಲ್ಲಿ ಪ್ರಜ್ವಲ್‌ ಇರುವಿಕೆಯ ಸ್ಥಳದ ಬಗ್ಗೆ ಎಸ್.ಐ.ಟಿ ಅಧಿಕಾರಿಗಳು ಹುಡುಕಾಟ ನಡೆಸಿದ್ದರು. ಇದರ ಫಲವಾಗಿ, ಜರ್ಮನಿಯ ಮ್ಯೂನಿಕ್ ನಿಲ್ದಾಣದಿಂದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ನಿಲ್ದಾಣಕ್ಕೆ ಪ್ರಜ್ವಲ್‌ ಬರುವುದು ದೃಢಪಟ್ಟಿದೆ. ಈ ಸಂಬಂಧ ಈಗಾಗಲೇ ಲುಫ್ತಾನ್ನಾ ಏರ್‌ಲೈನ್ಸ್ ವಿಮಾನದಲ್ಲಿ ಪ್ರಜ್ವಲ್ ಹೆಸರಿನಲ್ಲಿ ಟಿಕೆಟ್ ಕಾಯ್ದಿರಿಸಲಾಗಿದೆ ಎನ್ನಲಾಗಿದೆ. : , , , : , , 31. . , ’ ’ ’ , .