ದೇಶದಲ್ಲಿ ಒಂದೇ ದಿನ 1.32 ಲಕ್ಷ ಕೋವಿಡ್ ಪ್ರಕರಣಗಳು ಪತ್ತೆ. ನವದೆಹಲಿ,ಜೂನ್,2,2021(..):ದೇಶದಲ್ಲಿ ದಿನದ ಕೊರೋನಾ ಸೊಂಕಿನ ಪ್ರಕರಣಗಳು ಇತ್ತೀಚೆಗೆ ಕಡಿಮೆಯಾಗುತ್ತಿದ್ದು ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,32,788 ಹೊಸದಾಗಿ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಈ ಕುರಿತು ಮಾಹಿತಿ ನೀಡಿದ್ದು, ಕೊರೊನಾ ಸೋಂಕಿತರ ಸಂಖ್ಯೆ 2,83,07,832ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 3,207 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,35,102ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 17,93,645 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,61,79,085 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 2,31,456 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. : 1.32 - - –