ದೆಹಲಿಗೆ ಭೇಟಿ ನೀಡಿರುವುದಕ್ಕೆ ಕಾರಣ ತಿಳಿಸಿದ ಸಿಎಂ ಪುತ್ರ ಬಿವೈ ವಿಜಯೇಂದ್ರ… ನವದೆಹಲಿ,ಜೂನ್,1,2021(..):ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ಬೆಳಿಗ್ಗೆಯೇ ತಮ್ಮ ಆಪ್ತರ ಜತೆ ದೆಹಲಿಗೆ ಭೇಟಿ ನೀಡಿದ್ದಾರೆ. ಬೆಂಗಳೂರಿನಿಂದ ಬೆಳಿಗ್ಗೆ ತಮ್ಮ ಕೆಲವು ಬೆಂಬಲಿಗರೊಂದಿಗೆ ವಿಮಾನದಲ್ಲಿ ಹೊರಟಿದ್ದ ವಿಜಯೇಂದ್ರ ಅವರು 8 ಗಂಟೆಗೆ ದೆಹಲಿ ತಲುಪಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ದೆಹಲಿ ಭೇಟಿ ಬಗ್ಗೆ ಪ್ರತಿಕ್ರಿಯಿಸಿರುವ ಬಿವೈ ವಿಜಯೇಂದ್ರ, ವೈಯಕ್ತಿಕ ಕೆಲಸ ಹಿನ್ನೆಲೆಯಲ್ಲಿ ದೆಹಲಿಗೆ ಬಂದಿದ್ದೇನೆ.ಇದು ಯಾವುದೇ ನಿಗದಿತ ರಾಜಕೀಯ ಭೇಟಿ ಅಲ್ಲ. ಸದ್ಯ ಯಾವುದೇ ರಾಜಕೀಯ ಚಟುವಟಿಕೆಗಳು ನಡೆಯುತ್ತಿಲ್ಲ ಎಂದಿದ್ದಾರೆ. ಬಿ.ವೈ ವಿಜಯೇಂದ್ರ ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚಿಗೆ ಸಚಿವ ಸಿ.ಪಿ ಯೋಗೇಶ್ವರ್ ದೆಹಲಿಗೆ ಭೇಟಿ ನೀಡಿ ಬಂದ ಬಳಿಕ ನಾಯಕತ್ವ ಬದಲಾವಣೆ ಸುದ್ಧಿ ಹರಡಿತ್ತು. ಇದೀಗ ಈ ದಿಢೀರ್‌ ಭೇಟಿಯು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ : ’- - - – .