ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರರಿಬ್ಬರು ಸಾವು. ಮೈಸೂರು,ಜೂ,1,2021(..):ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಲಿಲಿತಾದ್ರಿಪುರ ರಿಂಗ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ಬಡಾವಣೆಯ ಚಿನ್ನಸ್ವಾಮಿ ಲಿಲಿತಾತ್ರಿಪುರ ನಿವಾಸಿ ಚಂದ್ರಪ್ಪ ಮೃತಪಟ್ಟವರು. ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದ್ದು ಈ ಕುರಿತು ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : – - –-