ಸೆಂಟ್ರಲ್ ವಿಸ್ತಾ ಕಾಮಗಾರಿಗೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್… ದೆಹಲಿ,ಮೇ,31,2021(..): ಕೊರೋನಾ ಸೋಂಕಿನ ಉಲ್ಬಣವಾಗುತ್ತಿರುವ ವೇಳೆಯೂ ನಡೆಸಲಾಗುತ್ತಿರುವ ಸೆಂಟ್ರಲ್ ವಿಸ್ತಾ ಕಾಮಗಾರಿಗೆ ತಡೆ ನೀಡುವಂತೆ ಕೋರಿ ಸಲ್ಲಿಸಿಲಾಗಿದ್ದ ಅರ್ಜಿಯನ್ನ ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಸೆಂಟ್ರಲ್ ವಿಸ್ತಾ ಪುನರಾಭಿವೃದ್ಧಿ ಯೋಜನೆಗೆ ನಿರ್ಮಾಣ ಕಾರ್ಯಕ್ಕೆ ತಡೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಈ ಕುರಿತಂತೆ ವ್ಯಕ್ತಿಯೊಬ್ಬರು ಸಲ್ಲಿಸಿದ್ದಂತ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದಂತೆ ದೆಹಲಿ ಹೈಕೋರ್ಟ್, ಸೆಂಟ್ರಲ್ ವಿಸ್ತಾ ಕಾಮಗಾರಿಗೆ ಒಪ್ಪಿಗೆ ನೀಡಿದೆ. ಕಾಮಗಾರಿಗೆ ತಡೆ ನೀಡುವ ಪ್ರಶ್ನೆಯೇ ಇಲ್ಲ. ಕಾರ್ಮಿಕರು ಸ್ಥಳದಲ್ಲಿಯೇ ಇದ್ದು ಕಾಮಗಾರಿ ನಡೆಸಬಹುದು ಎಂದು ಕೋರ್ಟ್ ತಿಳಿಸಿದೆ. ಅಲ್ಲದೆ ಅರ್ಜಿದಾರರಿಗೆ 1 ಲಕ್ಷ ರೂ ದಂಡವನ್ನೂ ವಿಧಿಸಿದೆ. : - - – - - -