ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್: ಎಸ್ ಐಟಿಯಿಂದ ಇಬ್ಬರ ಬಂಧನ. ಬೆಂಗಳೂರು,ಮೇ,28,2024 (..):ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆನ್ ಡ್ರೈವ್ ಹಂಚಿಕೆ ಮಾಡಿದ ಆರೋಪದ ಮೇಲೆ ಇಬ್ಬರನ್ನ ಎಸ್ ಐಟಿ ಪೊಲೀಸರು ಬಂಧಿಸಿದ್ದಾರೆ. ನವೀನ್ ಗೌಡ , ಚೇತನ್ ಗೌಡ ಬಂಧಿತರು. ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯಿದ್ದ ಕಾರಣ ಹೈಕೋರ್ಟ್ ಗೆ ಬಂದಿದ್ದ ವೇಳೆ ಈ ಇಬ್ಬರನ್ನು ಎಸ್ ಐ ಟಿ ಬಂಧಿಸಿದೆ. ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಏ.23 ರಂದು ಹಾಸನದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಡಿಯೋ ವೈರಲ್​ ಮಾಡಿದ್ದವರನ್ನು ಬಂಧಿಸದಕ್ಕೆ ಎಚ್​ಡಿ ಕುಮಾರಸ್ವಾಮಿ ಅವರು ಸಾಕಷ್ಟು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ದೂರು ದಾಖಲಾದ ಬರೋಬ್ಬರಿ ಒಂದು ತಿಂಗಳು ಬಳಿಕ ಆರೋಪಿಗಳ ಬಂಧನವಾಗಿದೆ. : , , , ,