ರಾಜ್ಯದ ವಿವಿಧೆಡೆ ಇಂದು ಭಾರಿ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು, ಮೇ 30,2021 (..):ಇಂದು ರಾಜ್ಯದ ವಿವಿಧೆಡೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡು ಭಾಗದಲ್ಲಿ ಗುಡುಗು-ಸಿಡಿಲು ಸಹಿತ ಮಳೆ ಬೀಳುವ ಸಾಧ್ಯತೆ ಇದೆ. ಬೆಳಗಾವಿ, ಗದಗ, ಧಾರವಾಡ ಮತ್ತು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.