ಇಂದು ‘ಮನ್ ಕಿ ಬಾತ್’ನಲ್ಲಿ ಪ್ರಧಾನಿ ಮೋದಿ ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ ಬೆಂಗಳೂರು, ಮೇ 30,2021 (..):‘ಮನ್ ಕಿ ಬಾತ್’ನಲ್ಲಿ ಇಂದು ಪ್ರಧಾನಿ ಮೋದಿ ಯಾವುದಾರರೊಂದು ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ. ಇಂದು ಪ್ರಧಾನಿ ನರೇಂದ್ರ ಮೋದಿ ‘ಮನ್ ಕಿ ಬಾತ್’ನಲ್ಲಿ ದೇಶದ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಕೋವಿಡ್ ಸಂಕಷ್ಟದಲ್ಲಿರುವ ಜನರ ನೆರವಿಗೆ ಪ್ಯಾಕೇಜ್ ಘೋಷಣೆ ಸಾಧ್ಯತೆ ಇದೆ ಎನ್ನಲಾಗಿದೆ. 11 ಗಂಟೆಗೆ ‘ಮನ್ ಕಿ ಬಾತ್ ಪ್ರಸಾರವಾಗಲಿದೆ. ಜೂನ್ 30 ರವರೆಗೆ ಕಠಿಣ ನಿರ್ಬಂಧಗಳನ್ನು ಮುಂದುವರೆಸುವಂತೆ ಕೇಂದ್ರದಿಂದ ರಾಜ್ಯಗಳಿಗೆ ಸಲಹೆ ನೀಡಿದ್ದು, ಇದರ ಬಗ್ಗೆಯೂ ಮೋದಿ ಮಾತನಾಡುವ ಸಾಧ್ಯತೆ ಇದೆ.