ಮೈಸೂರಿನಲ್ಲಿ ಬ್ಲಾಕ್ ಫಂಗಸ್ ಹೆಚ್ಚಳ: 54 ಪ್ರಕರಣಗಳು ದಾಖಲು.. ಮೈಸೂರು,ಮೇ,29,2021(..):ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಜತೆಗೆ ಬ್ಲಾಕ್ ಫಂಗಸ್ ಆತಂಕ ದಿನೇ ದಿನೇ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು 54 ಬ್ಲಾಕ್ ಫಂಗಸ್ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಮೈಸೂರಿನಲ್ಲಿ ಬ್ಲಾಕ್ ಪಂಗಸ್ ಪ್ರಕರಣ ಹೆಚ್ಚಾಗುತ್ತಿದೆ. ಜಿಲ್ಲೆಯಲ್ಲಿ 5 ಮಂದಿ ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. 6 ಮಂದಿ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ 43 ಸೋಂಕಿತರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆ.ಆರ್ ಆಸ್ಪತ್ರೆಯಲ್ಲಿ 34, ಜೆ.ಎಸ್.ಎಸ್ ಆಸ್ಪತ್ರೆಯಲ್ಲಿ 3, ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ 1 ಬ್ಲಾಕ್ ಫಂಗಸ್ ಸಕ್ರಿಯ ಪ್ರಕರಣಗಳಿವೆ. : - – -54 -.